ಬೆಂಗಳೂರು, (ಡಿಸೆಂಬರ್ 24): ಶ್ವೇತಾ ಗೌಡ ವಂಚನೆ ಕೇಸ್‌ನಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಮಾಜಿ ಸಚಿವ ವರ್ತೂರು ಪ್ರಕಾಶ್ (Varthur Prakash) ವಿಚಾರಣೆ ಬಳಿಕ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದ ವರ್ತೂರು ಪ್ರಕಾಶ್, ಎಸಿಪಿ ಗೀತಾ ಎದುರು ವಿಚಾರಣೆ ಎದುರಿಸಿದ್ದು, ಇದೇ ವೇಳೆ ಆರೋಪಿ ಶ್ವೇತಾ ಗೌಡ ಕೊಟ್ಟಿದ್ದ ಗಿಫ್ಟ್‌ಗಳನ್ನ ಅಂದ್ರೆ ನಗದು, ಚಿನ್ನಾಭರಣ ಎಲ್ಲವನ್ನೂ ಪೊಲೀಸರಿಗೆ ವಾಪಸ್ ಹಿಂದಿರುಗಿಸಿದ್ದಾರೆ. ಒಟ್ಟು 12.50 ಲಕ್ಷ ರೂ. ನಗದು, 12.46 ಲಕ್ಷ ನಗದು, 100 ಗ್ರಾಂ ಚಿನ್ನಾಭರಣ, 1 ಉಂಗುರ ವಾಪಸ್ ನೀಡಿದ್ದಾರೆ.
ಹಲವು ಸ್ಪೋಟಕ ಮಾಹಿತಿ ಬಹಿರಂಗ
ವಂಚಕಿ ಶ್ವೇತಾ ವಿಚಾರಣೆ ವೇಳೆ ಹಲವು ಸ್ಪೋಟಕ ಮಾಹಿತಿಗಳು ಬಹಿರಂಗವಾಗಿದೆ. ಶ್ವೇತಾಗೌಡ ಹಾಗೂ ವರ್ತೂರು ಪ್ರಕಾಶ್‌ಗೆ ನಿಕಟ ನಂಟಿರುವುದು ಪತ್ತೆಯಾಗಿದೆ. ಇಬ್ಬರೂ ಹಲವು ಬಾರಿ ಚಾಮುಂಡಿ ಬೆಟ್ಟಕ್ಕೆ ಹೋಗಿ ಬಂದಿದ್ದಾರೆ. ಅಚ್ಚರಿ ಅಂದ್ರೆ ವರ್ತೂರು ಪ್ರಕಾಶ್, ಶ್ವೇತಾ ಗೌಡ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದು ಎಂದು ತಿಳಿದುಬಂದಿದೆ. ತಿರುಪತಿಯಲ್ಲಿ ಎಂಗೇಜ್ಮೆಂಟ್ ಮಾಡಿಕೊಳ್ಳಲು ಟಿಕೆಟ್ ಸಹ ಬುಕ್ ಮಾಡಿರುವುದು ಬಹಿರಂಗವಾಗಿದೆ. ಇದಕ್ಕೆ ಪೂರಕವಾಗಿ ಶ್ವೇತಾ ಮೊಬೈಲ್‌ನಲ್ಲಿ ಹಲವು ಫೋಟೋ ಸಾಕ್ಷ್ಯಗಳು ಸಿಕ್ಕಿವೆ. 3 ಚಿನ್ನದ ಅಂಗಡಿ ಮಾಲೀಕರ ಜ್ಯುವೆಲ್ಲರಿ ಶಾಪ್‌ಗೆ ಶ್ವೇತಾ ಜೊತೆ ವರ್ತೂರು ಪ್ರಕಾಶ್ ಹೋಗಿರುವುದಕ್ಕೆ ಸಾಕ್ಷಿ ಸಿಕ್ಕಿದೆ. ಅಲ್ಲದೇ ವರ್ತೂರ್ ಪ್ರಕಾಶ್, ಎಂಗೇಜ್ಮೆಂಟ್ ವೇಳೆ ಹಾಕಬೇಕಿದ್ದ ಉಂಗುರದ ಫೋಟೋವನ್ನು ಸಹ ಶ್ವೇತಾಗೆ ಕಳುಹಿಸಿರುವುದು ಪತ್ತೆಯಾಗಿದೆ.