ಹಾವೇರಿ: ಲಾರಿಗೆ ವ್ಯಾಗನಾರ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಮೃತರನ್ನು ಕೆ.ಎನ್.ಹನುಮಂತಪ್ಪ ನಿಂಗಪ್ಪ (60), ಗೀತಮ್ಮ (50) ಮತ್ತು ಶಿವಾನಿ (11) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರೆಲ್ಲರೂ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದವರು ಎನ್ನಲಾಗಿದೆ.
Laxmi News 24×7