Breaking News

1924ರ ಕಾಂಗ್ರೇಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶತಮಾನೊತ್ಸವ ಕಾರ್ಯಕ್ರಮ

Spread the love

ಬೆಳಗಾವಿ ಡಿ.25 : ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೇಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶತಮಾನೊತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹಾತ್ಮಾ ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೆ ಪರಿಚಯಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಪ್ರವಾಸೊದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ ಅವರು ತಿಳಿಸಿದರು.

ಬೆಳಗಾವಿ ಸುವರ್ಣ ಸೌಧ ಆವರಣದಲ್ಲಿ ಬುಧವಾರ (ಡಿ.25) ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣ ಸಮಾರಂಭದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಅವರು‌ ಮಾತನಾಡಿದರು.

ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಅಧಿವೇಶನ ಕೇವಲ ಪಕ್ಷದ ಅಧಿವೇಶನವಾಗಿರದೇ, ಸಾಮಾಜಿಕ‌ ಸುಧಾರಣೆಯ ಅಸ್ತ್ರವಾಗಿತ್ತು ಎಂದರು.

ಸಮಾಜದಲ್ಲಿನ‌ ಅಸ್ಪ್ರಶ್ಯತೆಯನ್ನು ನಿವಾರಿಸಿ ಭ್ರಾತೃತ್ವ ಭಾವನೆಯನ್ನು ಬೆಸೆಯುವುದರ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಲಾಯಿತು.
1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೇಸ್ ಅಧಿವೇಶನ ಶತಮಾನೋತ್ಸವನ್ನು ಆಚರಿಸುವ ಮೂಲಕ ಇತಿಹಾಸ ಮರುಕಳಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಪಾಟೀಲ ವಿವರಿಸಿದರು.

ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೂ ಪರಿಚಯಿಸುವ ಉದ್ದೇಶದೊಂದಿಗೆ ಶತಮಾನೋತ್ಸವದ ಅಂಗವಾಗಿ ರಾಜ್ಯ ಸರಕಾರ 41 ಕಾರ್ಯಕ್ರಮಗಳನ್ನು ಘೋಷಣೆ ಮಾಡಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ