Breaking News

ಮಣಿಪುರದಲ್ಲಿ ಸೇನಾ ವಾಹನ ಅಪಘಾತ: ಇನ್ನೆರಡು ತಿಂಗಳಲ್ಲಿ ನಿವೃತ್ತಿ ಹೊಂದಲಿದ್ದ ಚಿಕ್ಕೋಡಿ ಯೋಧ ಸಾವು

Spread the love

ಚಿಕ್ಕೋಡಿ: ಮಣಿಪುರದ ಬೊಂಬಾಲಾ ಕ್ಷೇತ್ರದಲ್ಲಿ ಸೇನಾ ವಾಹನ ಪಲ್ಟಿಯಾಗಿ ಚಿಕ್ಕೋಡಿ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪಾನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತಾ(42) ಸಾವನ್ನಪ್ಪಿದವರು.

ಸೋಮವಾರ ಮಧ್ಯಾಹ್ನ ದಾರಿಮಧ್ಯೆ ಗುಡ್ಡ ಕುಸಿದ ಪರಿಣಾಮ ಸೇನೆಯ 2.5 ಡೈಟನ್ ವಾಹನ‌ ಪಲ್ಟಿಯಾಗಿತ್ತು. ಸೇನಾ ವಾಹನದಲ್ಲಿ ಒಟ್ಟು ಆರು ಜನ ಯೋಧರು ಪ್ರಯಾಣಿಸುತ್ತಿದ್ದರು.

ಆರು ಯೋಧರ ಪೈಕಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿರುವ ಇಬ್ಬರು ಯೋಧರ ಪೈಕಿ ಓರ್ವ ಯೋಧ ಕುಪ್ಪಾನವಾಡಿ ಗ್ರಾಮದವರು. ಫೆಬ್ರವರಿ ತಿಂಗಳಲ್ಲಿ ನಿವೃತ್ತಿ ಆಗುವವರಿದ್ದರು. 2002ರಲ್ಲಿ ಸೇನೆಗೆ ಸೇರಿದ್ದ ಅವರು 22 ವರ್ಷ ಸೇವೆ ಸಲ್ಲಿಸಿದ್ದರು.

ಹುತಾತ್ಮ ಯೋಧನಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಮಂಗಳವಾರ ಮರಣೋತ್ತರ ಪರೀಕ್ಷೆ ತಡವಾದ ಹಿನ್ನೆಲೆ ಯೋಧ ಧರ್ಮರಾಜ ಪಾರ್ಥಿವ ಶರೀರ ಗುರುವಾರ ಮಧ್ಯಾಹ್ನ ಸ್ವಗ್ರಾಮ ಕುಪ್ಪಾನವಾಡಿಗೆ ಆಗಮಿಸಲಿದೆ.


Spread the love

About Laxminews 24x7

Check Also

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

Spread the loveರಾಯಚೂರು: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಒಂದೂವರೆ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ