Breaking News

ಕುಂದಾನಗರಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದ್ದು, ರಾಷ್ಟ್ರೀಯ‌ ನಾಯಕರ ಸ್ವಾಗತಕ್ಕೆ ಜಿಲ್ಲೆಯ ಕೈ ಮುಖಂಡರು, ಕಾರ್ಯಕರ್ತರು ತುದಿಗಾಲ ಮೇಲೆ‌ ನಿಂತಿದ್ದಾರೆ.

Spread the love

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದ್ದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ.

ಕುಂದಾನಗರಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದ್ದು, ರಾಷ್ಟ್ರೀಯ‌ ನಾಯಕರ ಸ್ವಾಗತಕ್ಕೆ ಜಿಲ್ಲೆಯ ಕೈ ಮುಖಂಡರು, ಕಾರ್ಯಕರ್ತರು ತುದಿಗಾಲ ಮೇಲೆ‌ ನಿಂತಿದ್ದಾರೆ.

ಇಡೀ ದೇಶದ ಚಿತ್ತ ಈಗ ಬೆಳಗಾವಿಯತ್ತ ನೆಟ್ಟಿದೆ. 1924, ಡಿ.26ರಂದು ಬಾಪೂಜಿ ನೇತೃತ್ವದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ನಡೆದಿದ್ದ ಅಂದಿನ ವಿಜಯ ನಗರದ, ಇಂದಿನ ಟಿಳಕವಾಡಿ ವೀರಸೌಧ ಮತ್ತೊಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗುತ್ತಿದೆ.ನೂರು ವರ್ಷಗಳ ಹಿಂದೆ ನಡೆದ ಅಧಿವೇಶನದ ಅದೇ ಸಮಯಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಪ್ರಾರಂಭವಾಗಲಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಅಂದು ಗಾಂಧೀಜಿ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಸೂಚಿ ನೀಡಿದ್ಧ ವೀರಸೌಧದಲ್ಲಿ‌ ಶತಮಾನೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ಇನ್ನಿಲ್ಲದ ತಯಾರಿ‌ ನಡೆಸಿದ್ದು, ಎರಡು ದಿನಗಳ ಕಾಲ ಮಹತ್ವದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕೈ ನಾಯಕರ ದಂಡೇ ಹರಿದು‌ ಬರುತ್ತಿದೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ