Breaking News

ಹಣಕ್ಕಾಗಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ, ಗುತ್ತಿಗೆದಾರ ಆತ್ಮಹತ್ಯೆ!

Spread the love

ಕಲಬುರಗಿ, (ಡಿಸೆಂಬರ್ 26): ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಯುವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾನೆ.

7 ಪುಟಗಳ ಡೆತ್​ನೋಟ್​ ಬರೆದಿಟ್ಟು ಗುತ್ತಿಗೆದಾರ ಸಚಿನ್(26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್​ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಟ್ರಾಕ್ ನಲ್ಲಿ ಪತ್ತೆಯಾಗಿದೆ.

ಡೆತ್​ ನೋಟ್​ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್‌ ರಾಜು ಕಪನೂರು ವಿರುದ್ಧ ಕೆಲ ಗಂಭೀರ ಆರೋಪಗಳನ್ನು ಮಾಡಲಾಗಿದೆ.15 ಲಕ್ಷಕ್ಕೂ ಹೆಚ್ಚು ಹಣ ಪಡೆದು ಟೆಂಡರ್ ನೀಡದೆ ವಂಚನೆ ಮಾಡಿದ್ದು, ಜೊತೆಗೆ 1 ಕೋಟಿ ರೂ. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ರಾಜು ಕಪನೂರು ವಿರುದ್ಧ ಆರೋಪಿಸಲಾಗಿದೆ.

ಇನ್ನು ಸಚಿನ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಡೆತ್​ ನೋಟ್​ನಲ್ಲಿ ಉಲ್ಲೇಖಿಸಿರುವ ಹೆಸರಿನವರನ್ನು ಕರೆಯಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಇದರ ನಡುವೆಯೇ ಪೊಲೀಸರು ಸಚಿನ್ ಮೃತದೇಹವನ್ನು ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ