Breaking News

ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾವು

Spread the love

ಡಿಸೆಂಬರ್​ 26: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು (Death) ಮುಂದುವರೆದಿದೆ. ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಗೋಕಾಕ್ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಅಡಿವೆಪ್ಪ ಖಡಕಬಾವಿ(25) ಮೃತ ಬಾಣಂತಿ. ಮಗಳ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಡಿ.24ರಂದು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಪೂಜಾ ದಾಖಲಾಗಿದ್ದರು. ನಿನ್ನೆ ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ಫಿಟ್ಸ್​​​ ಬಂದು ಮೃತಪಟ್ಟಿರುವುದಾಗಿ ಪೂಜಾ ಸಂಬಂಧಿಕರಿಗೆ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಬಳಿಕ ಪೋಸ್ಟ್​​ಮಾರ್ಟಮ್ ನಡೆಸದೇ ತರಾತುರಿಯಲ್ಲಿ ಬಾಣಂತಿ ಶವಕೊಟ್ಟು ವೈದ್ಯರು ಕಳಿಸಿದ್ದಾರೆ ಎನ್ನಲಾಗಿದೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ