ಕಿರುತೆರೆ ನಟ ಚರಿತ್ ಬಾಳಪ್ಪ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಹಾಗಾಗಿ ಆರ್ಆರ್ ನಗರ ಠಾಣೆಯ ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದಾರೆ. ಕನ್ನಡದ ‘ಮುದ್ದುಲಕ್ಷ್ಮಿ’ ಸೇರಿದಂತೆ ಹಲವು ಸೀರಿಯಲ್ನಲ್ಲಿ ಚರಿತ್ ನಟಿಸಿದ್ದಾರೆ. ತೆಲುಗಿನಲ್ಲೂ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಗುರುತಿಸಿಕೊಂಡಿದ್ದಾರೆ. ತನಗೆ ಪರಿಚಯವಿದ್ದ ಗೆಳತಿಗೆ ಲೈಂಗಿಕ ದೌರ್ಜನ್ಯ ಎಸಗಿರೋ ಆರೋಪ ಈಗ ಚರಿತ್ ಬಾಳಪ್ಪ ಮೇಲೆ ಎದುರಾಗಿದೆ.
ಪ್ರೀತಿಸುತ್ತೇನೆ ಅಂತ ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ ಎಂದು ಯುವತಿಯೊಬ್ಬರು ಆರೋಪ ಮಾಡಿದ್ದಾರೆ. ಯುವತಿ ವಾಸ ಮಾಡುತ್ತಿದ್ದ ಮನೆಗೆ ಸಹಚರರ ಜೊತೆ ನುಗ್ಗಿದ ಚರಿತ್ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಅಷ್ಟಲ್ಲದೇ ಯುವತಿ ಬಳಿ ಹಣಕ್ಕೂ ಬೇಡಿಕೆ ಇಟ್ಟಿರುವ ಆರೋಪ ಇದೆ. ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
Laxmi News 24×7