ವಿಜಯಪುರ, : ಬಿಆರ್ ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಸಚಿವ ಅಮಿತ್ ಶಾ (Amit Shah) ಅವಮಾನಕಾರಿ ಹೇಳಿಕೆ ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳು ನಾಳೆ ವಿಜಯಪುರ ಬಂದ್ಗೆ ಕರೆ ನೀಡಿದ್ದರು. ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆ ವಿಜಯಪುರ ಬಂದ್ ಅನ್ನು ಹೋರಾಟಗಾರರು
ಮುಂದೂಡಿದ್ದಾರೆ. ನಾಳೆ ಬದಲಾಗಿ ಡಿಸೆಂಬರ್ 30ರಂದು ಬಂದ್ಗೆ ಕರೆ ನೀಡಿದ್ದಾರೆ.ಮಾಜಿ ಶಾಸಕ ಪ್ರೊ. ರಾಜು ಅಲಗೂರು, ಸೋಮನಾಥ ಕಳ್ಳಿಮನಿ, ಅಬ್ದುಲ್ ಹಮೀದ್ ಮುಶ್ರೀಫ್ ಹಾಗೂ ಇತರರಿಂದ ನಗರದ ಪ್ರವಾಸಿ ತಾಣದಲ್ಲಿ ಸುದ್ದಿಗೋಷ್ಟಿ ಮಾಡಿದ್ದು,
ಅಹಿಂದ, ಪ್ರಗತಿಪರ, ದಲಿತಪರ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಾಳೆ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿಜಯಪುರ ಬಂದ್ಗೆ ಕರೆ ನೀಡಲಾಗಿತ್ತು. ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಕಾರಣ ಬಂದ್ ಮುಂದೂಡಲಾಗಿದೆ. ಬಂದ್ ಮುಂದೂಡಿಕೆ ಬಗ್ಗೆ ಜಿಲ್ಲಾಡಳಿತಕ್ಕೂ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.