Breaking News

ಕಲಬುರಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಬಿಜೆಪಿ ನಾಯಕರು, ಪೊಲೀಸ್ ಮಧ್ಯೆ ಹೈಡ್ರಾಮಾ

Spread the love

ಕಲಬುರಗಿ, ಡಿಸೆಂಬರ್ 28: ಬೀದರ್ ಮೂಲದ ಕಾಂಟ್ರಾಕ್ಟರ್ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ, ಡೆತ್​ನೋಟ್​ನಲ್ಲಿ ಸುಪಾರಿ ಬಗ್ಗೆ ಉಲ್ಲೇಖವಾಗಿರುವುದು ಕಾಂಗ್ರೆಸ್-ಬಿಜೆಪಿ ರಾಜಕೀಯ ಜಿದ್ದಾಜಿದ್ದಿಗೆ ನಾಂದಿ ಹಾಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಮಾಜಿ ಕಾರ್ಪೋರೆಟರ್ ರಾಜು ಕಪನೂರ್ ಹಾಗೂ ಗ್ಯಾಂಗ್ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ್, ಆಂದೋಲಾ ಸ್ವಾಮೀಜಿ ಶ್ರೀ ಸಿದ್ದಲಿಂಗ ಸ್ವಾಮೀಜಿ, ಚಂದು ಪಾಟೀಲ್, ಮಣಿಕಂಠ ಸೇರಿ ನಾಲ್ಕು ಜನರ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂಬ ಉಲ್ಲೇಖದ ಡೆತ್​ನೋಟ್ ಕಲಬುರಗಿಯ ಬಿಜೆಪಿ ನಾಯಕರಲ್ಲಿ ಭಯ ಹುಟ್ಟಿಸಿದೆ.

ಡೆತ್​​ನೋಟ್​ನಲ್ಲಿ ಉಲ್ಲೆಖಿಸಿದ ಅಂಶಗಳ ಆಧಾರದ ಮೇಲೆ ಬಿಜೆಪಿ ಪಡೆ ಪೊಲೀಸ್ ಕಮಿಷನರ್ ಡಾ. ಶರಣಪ್ಲ ಎಸ್​ಡಿ ಅವರನ್ನು ಭೇಟಿಯಾಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ದಾಖಲಿಸಲು ಹೋಗಿದ್ದರು. ಆದರೆ ಸ್ಟೇಷನ್ ಬಜಾರ್ ಠಾಣೆ ಇನ್ಸ್​​ಪೆಕ್ಟರ್ ನಾನಾ ಕಾರಣಗಳನ್ನು ಹೇಳಿ ದೂರು ಪಡೆಯಲು ಹಿಂದೇಟು ಹಾಕಿದ್ದಕ್ಕೆ ಇನ್ಸಪೇಕ್ಟರ್, ಸಿಬ್ಬಂದಿ ಹಾಗೂ ಬಿಜೆಪಿ ನಾಯಕರ ಮಧ್ಯೆ ತೀವ್ರ ವಾಗ್ವಾದ ನಡೆದಿದೆ. ಸ್ಟೇಷನ್ ಬಜಾರ್ ಠಾಣೆಯಲ್ಲಿ ಹೈ ಡ್ರಾಮಾವೇ ನಡೆದಿದೆ.

ಕಾಂಟ್ರಾಕ್ಟರ್ ಡೆತ್​ನೋಟ್​ನಲ್ಲಿ ಉಲ್ಲೇಖಿಸಿದಂತೆ ನಾಲ್ಕು ಜನರು ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಅವರ ಆಪ್ತ ರಾಜು ಕಪನೂರ್ ಮತ್ತಿ ಗ್ಯಾಂಗ್ ವಿರುದ್ದ ಎಫ್​ಐಆರ್ ದಾಖಲು ಮಾಡುವಂತೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದರು. ಆದರೆ ಸ್ಟೇಷನ್ ಬಜಾರ್ ಠಾಣೆ ಇನ್ಸ್​​​ಪೆಕ್ಟರ್ ದೂರು ಪಡೆಯದೇ ಇದ್ದಾಗ ಬಿಜೆಪಿ ಮುಖಂಡರು ಮತ್ತು ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ. ಪೊಲೀಸರ ನಡೆ ಖಂಡಿಸಿ ಕಮಲ ಪಡೆ ನಾಯಕರು ಸ್ಟೇಷನ್ ಬಜಾರ್ ಠಾಣೆ ಎದುರು ಪ್ರತಿಭಟನೆ ನಡೆಸಿ ಖಾಕಿ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.


Spread the love

About Laxminews 24x7

Check Also

ತುಮಕೂರು: ಮುಂಬೈ ಮಾದರಿ ಗಣಪತಿ ವಿಗ್ರಹಗಳಿಗೆ ಹೆಚ್ಚು ಬೇಡಿಕೆ

Spread the loveತುಮಕೂರು: 2025ರ ಚೌತಿ ಬಂದೇ ಬಿಡ್ತು. ಭಕ್ತರು ವಿಭಿನ್ನ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಲು ತಯಾರಿ ನಡೆಸುತ್ತಿದ್ದಾರೆ. ಅದರಲ್ಲೂ ಮುಂಬೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ