Breaking News

ಹುಬ್ಬಳ್ಳಿಯಲ್ಲಿ ಡ್ರಗ್ ಪೆಡ್ಲರ್​ಗಳ ಪರೇಡ್

Spread the love

ಹುಬ್ಬಳ್ಳಿ: “ಹೊಸವರ್ಷ ಆಚರಣೆ ವೇಳೆ ಅಕ್ರಮ ಚಟುವಟಿಕೆಗಳು ಹೆಚ್ಚಾಗಿರುತ್ತವೆ. ಬೇರೆ ಬೇರೆ ಊರುಗಳಿಂದ ಹುಬ್ಬಳ್ಳಿಗೆ ಬರುವವರ ಸಂಖ್ಯೆ ಕೂಡ ಹೆಚ್ಚಾಗಿರುತ್ತೆ. ಈ ಸಂದರ್ಭದಲ್ಲಿ ಅಪರಾಧ ಕೃತ್ಯಗಳು ನಡೆಯುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆ ಮಾದಕ ವಸ್ತುಗಳ ಪೆಡ್ಲರ್ ಪರೇಡ್ ನಡೆಸಲಾಗಿದೆ” ಎಂದು ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದರು.

ನಗರದ ಹಳೇ ಸಿಎಆರ್ ಮೈದಾನದಲ್ಲಿ ಡ್ರಗ್​ ಪೆಡ್ಲರ್ ಪರೇಡ್ ನಡೆಸಿ ಪೆಡ್ಲರ್ಸ್​ಗೆ ಖಡಕ್​ ವಾರ್ನಿಂಗ್​ ಕೊಟ್ಟ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, “ಹೊಸವರ್ಷಕ್ಕೆ ಹಲವು ಕಾರ್ಯಕ್ರಮಗಳು ನಡೆಯುತ್ತವೆ. ಈ ಸಂದರ್ಭದಲ್ಲಿ ಅಪರಾಧ ಕೃತ್ಯಗಳು ನಡೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

50 ಪೆಡ್ಲರ್​ಗಳ ಮೇಲೆ ದೂರು ದಾಖಲಿಸಿಕೊಂಡಿದ್ದೇವೆ. 200ಕ್ಕೂ ಹೆಚ್ಚು ಪೆಡ್ಲರ್ಸ್​ಗಳನ್ನು ವಶಕ್ಕೆ ಪಡೆದು ಎನ್​ಡಿಪಿಎಸ್ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗಿದೆ‌” ಎಂದರು.ಕಳೆದ ನಾಲ್ಕೈದು ತಿಂಗಳಿನಿಂದ ಮಾದಕ ವ್ಯಸನಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಸಾವಿರಕ್ಕೂ ಹೆಚ್ಚು ಪಾಸಿಟಿವ್ ಬಂದಿವೆ. ಕಳೆದ 10 ವರ್ಷದಲ್ಲಿ ದಾಖಲಾದ ಪ್ರಕರಣಗಳ ಆಧಾರದ ಮೇಲೆ 440 ಪೆಡ್ಲರ್ಸ್​ಗಳನ್ನು ಗುರುತಿಸಲಾಗಿದೆ. ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರ ಮೇಲೆ ನಿಗಾ ಇಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ, ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲು ಸೂಚನೆ ನೀಡಲಾಗಿದೆ” ಎಂದು ಹೇಳಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ