ಹುಬ್ಬಳ್ಳಿ : ಅನೈಸರ್ಗಿಕ ಲೈಂಗಿಕ ಕ್ರಿಯೆಗೆ ಒಪ್ಪದಿದ್ದಾಗ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಸೋನಿಯಾಗಾಂಧಿ ನಗರದ ನಿವಾಸಿಯಾದ ಕುಮಾರ್ ಬೆಟಗೇರಿ (57) ಎಂಬಾತ ಮೃತ ವ್ಯಕ್ತಿಯಾದ್ರೆ, ದೇವಾಂಗಪೇಟೆ ನಿವಾಸಿಯಾದ ಗೌಸ್ ಮೊಹಮ್ಮದ್ ನದಾಫ್ (40) ಎಂಬಾತ ಬಂಧಿತ ಆರೋಪಿ. ಗೌಸ್ ಮೊಹಮ್ಮದ್ ಡಿ. 22 ರಂದು ಸುಳ್ಳ ರೋಡ್ ಇಂದ್ರಪ್ರಸ್ಥ ಲೇಔಟ್ನಲ್ಲಿ ಕುಮಾರ್ ಬೆಟಗೇರಿಯನ್ನ ಕೊಲೆ ಮಾಡಿ ಪರಾರಿಯಾಗಿದ್ದು, ಈ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.![]()
ಪ್ರಕರಣದ ಆರೋಪಿಯನ್ನು ಪತ್ತೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹುಬ್ಬಳ್ಳಿ ಉತ್ತರ ಉಪವಿಭಾಗದ ಎಸಿಪಿ ಶಿವಪ್ರಕಾಶ್ ನಾಯಕ್ ಅವರ ನೇತೃತ್ವದಲ್ಲಿ, ಕೇಶ್ವಾಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕೆ ಎಸ್ ಹಟ್ಟಿ ಮತ್ತವರ ಠಾಣೆಯ ಅಧಿಕಾರಿ ಸಿಬ್ಬಂದಿಯನ್ನ ಒಳಗೊಂಡ ತಂಡವನ್ನು ರಚಿಸಲಾಗಿತ್ತು.ಈ ತಂಡವು ಪ್ರಕರಣದ ಆರೋಪಿಯಾದ ದೇವಾಂಗಪೇಟೆಯ ಗೌಸ್ ಮೊಹಮ್ಮದ್ ನದಾಫ್ ಎಂಬಾತನನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಮತ್ತು ಮೃತನಿಂದ ಸುಲಿಗೆ ಮಾಡಿದ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
Laxmi News 24×7