Breaking News

ಡಿಸೆಂಬರ್​​​​​​​​​​​​ 31 ರಿಂದ ನಡೆಯಲಿರುವ ರಾಜ್ಯ ಸಾರಿಗೆ ಇಲಾಖೆಯ ನೌಕರರ ಅನಿರ್ದಿಷ್ಟಾವಧಿಯ ಮುಷ್ಕರ?

Spread the love

ಬೆಂಗಳೂರು: ಡಿಸೆಂಬರ್​​​​​​​​​​​​ 31 ರಿಂದ ನಡೆಯಲಿರುವ ರಾಜ್ಯ ಸಾರಿಗೆ ಇಲಾಖೆಯ ನೌಕರರ ಅನಿರ್ದಿಷ್ಟಾವಧಿಯ ಮುಷ್ಕರದ ಹಿನ್ನೆಲೆ ಕಾರ್ಮಿಕ ಇಲಾಖೆ ಆಯುಕ್ತರ ನೇತೃತ್ವದಲ್ಲಿ ನಡೆಯಬೇಕಾಗಿದ್ದ ಸಭೆಯನ್ನು ಸೋಮವಾರ ಡಿಸೆಂಬರ್ 30ಕ್ಕೆೆ ಮುಂದೂಡಲಾಗಿದೆ.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಸದಸ್ಯರನ್ನೊಳಗೊಂಡ ಜಂಟಿ ಕ್ರಿಯಾ ಸಮಿತಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘದ ಮುಖಂಡ ಹೆಚ್.ವಿ. ಅನಂತ ಸುಬ್ಬರಾವ್ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯೊಂದಿಗೆ ನಡೆಸಲಿರುವ ಸಭೆಯನ್ನು ಡಿಸೆಂಬರ್ 30ಕ್ಕೆೆ ಮುಂದೂಡಲಾಗಿದೆ.

“ಸರ್ಕಾರ ನಮ್ಮನ್ನು ಕರೆದು ಚರ್ಚಿಸಲಿ ಎನ್ನುವ ಕಾರಣಕ್ಕೆೆ ನೋಟಿಸ್ ನೀಡಿದ್ದೇವೆ. ಆದರೆ ಸರ್ಕಾರ ಈವರೆಗೆ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ಬದಲಿಗೆ ಮುಷ್ಕರ ಮಾಡಿದರೆ ಎಸ್ಮಾ ಜಾರಿ ಮಾಡುತ್ತೇವೆ” ಎಂದು ಹೇಳಿದ್ದಾರೆ ಎಂದು ದೂರಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ