Breaking News

ಗುತ್ತಿಗೆದಾರ ಸಚಿನ್ ಸಾವಿನ ಕುರಿತು ನ್ಯಾಯಾಂಗ ತನಿಖೆ ಆಗಬೇಕು. ಇದಕ್ಕೂ ಮೊದಲು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಬೇಕು ಎಂದು ಎಂಎಲ್​ಸಿ ಎನ್. ರವಿಕುಮಾರ್ ಆಗ್ರಹಿಸಿದರು.

Spread the love

ಬೆಂಗಳೂರು: “ಗುತ್ತಿಗೆದಾರ ಸಚಿನ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಆಗಬೇಕು. ಸಚಿವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಡಬೇಕು” ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,” ಹೆಣ್ಣುಮಕ್ಕಳ ದುರ್ಬಳಕೆಯ ಸಂಚು ಸೇರಿದಂತೆ ಅನೇಕ ವಿಷಯಗಳು ಸಚಿನ್ ಡೆತ್​ನೋಟಿನಲ್ಲಿವೆ” ಎಂದು ತಿಳಿಸಿದರು.

“ತನಿಖೆ ನಡೆಯಲೆಂದು ಮುಂಚಿತವಾಗಿ ತಿಳಿಸಿದರೆ ಬಚಾವ್ ಆಗಬಹುದೆಂದು ಪ್ರಿಯಾಂಕ್ ಅವರು ಪತ್ರಿಕಾಗೋಷ್ಠಿ ಮಾಡಿದ್ದಾರೆ. ಈಶ್ವರಪ್ಪನವರ ರಾಜೀನಾಮೆ ಪಡೆದ ದಾರಿಯಲ್ಲೇ ರಾಜೀನಾಮೆ ಕೊಡಬೇಕು. ನಿಮ್ಮ ಪಾತ್ರ ಏನೂ ಇಲ್ಲ ಎಂದು ಗೊತ್ತಾದರೆ ನೀವು ಮುಖ್ಯಮಂತ್ರಿಯಾದರೂ ನಮ್ಮ ಅಭ್ಯಂತರವಿಲ್ಲ. ನಾವು ಸುಲಭವಾಗಿ ಬಿಡುವುದಿಲ್ಲ, ಹೋರಾಟವನ್ನು ಮುಂದುವರೆಸುತ್ತೇವೆ. ಸಚಿನ್ ಬರೆದ ಪತ್ರದ ಮಾಹಿತಿಯ ಇಂಚಿಂಚನ್ನೂ ರಾಜ್ಯದಲ್ಲಿ ನಾವು ಪ್ರಚಾರ ಮಾಡುತ್ತೇವೆ” ಎಂದು ಹೇಳಿದರು.

“ವಿಪಕ್ಷ ನಾಯಕರು, ನಮ್ಮ ಕಾರ್ಯಕರ್ತರ ಮೇಲೆ ಸುಲಭವಾಗಿ ಎಫ್‍ಐಆರ್ ಆಗುತ್ತಿದೆ. ಆದರೆ, ವಿಪಕ್ಷದವರು ಆಡಳಿತ ಪಕ್ಷದವರ ಮೇಲೆ ದೂರು ನೀಡಿದರೆ ಎಫ್‍ಐಆರ್ ಆಗುತ್ತಿಲ್ಲ. ಸಿ.ಟಿ. ರವಿಯವರು ಕೊಟ್ಟ ದೂರಿನ ಎಫ್‍ಐಆರ್ ಮಾಡಿಲ್ಲ. ಎಫ್‍ಐಆರ್ ಮಾಡದೆ ಅವರನ್ನು ರಾತ್ರಿಯೆಲ್ಲ ಸುತ್ತಾಡಿಸಿದ್ದಾರೆ. ಕಲಬುರಗಿಯಲ್ಲಿ ಕೂಡ ಎಫ್‍ಐಆರ್ ಮಾಡಿಲ್ಲ. ಅದಕ್ಕೆ ಕೋರ್ಟ್ ನಿರ್ದೇಶನ ನೀಡಬೇಕಾಯಿತು” ಎಂದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ