Breaking News

ಸರ್ಕಾರಕ್ಕೆ ಬೀಸಿ ಮುಟ್ಟಿಸಲು ಮುಂದಾದ ಆಶಾ ಕಾರ್ಯಕರ್ತೆಯರು…

Spread the love

ಬೆಳಗಾವಿ: ಅಧಿವೇಶನದಲ್ಲಿ ಸಮಯ ನೀಡದ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಆಶಾ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ. ವಿವಿಧ ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ಜನವರಿ 7 ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಪ್ರತಿಭಟನೆ ನಡೆಸಿ ಅನಿರ್ದಿಷ್ಟಾವಧಿಯ ಮುಷ್ಕರ ಕೈಗೊಳ್ಳುವ ನಿರ್ಣಯ ಕೈಗೊಂಡಿದ್ದಾರೆ.

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸದ್ಯ ನೀಡುತ್ತಿರುವ 5 ಸಾವಿರ ರೂಪಾಯಿ ವೇತನವನ್ನು 15 ಸಾವಿರ ರೂಪಾಯಿಗೆ ಹೆಚ್ಚಳ ಮಾಡಬೇಕು. ಆರೋಗ್ಯ ಸಮಸ್ಯೆಯಿದ್ದಾಗ ರಜೆ ನೀಡಬೇಕು. ಸೇವಾ ಭದ್ರತೆಯನ್ನ ನೀಡಬೇಕು ಸೇರಿದಂತೆ ಇನ್ನುಳಿದವ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು.

ಈ ಕುರಿತು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲು ಸಮಯ ನೀಡಲಿಲ್ಲ. ಆದ್ದರಿಂದ ಜನವರಿ 7 ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಪ್ರತಿಭಟನೆ ನಡೆಸಿ ಅನಿರ್ದಿಷ್ಟಾವಧಿಯ ಮುಷ್ಕರ ಕೈಗೊಳ್ಳುವ ನಿರ್ಣಯವನ್ನು ಆಶಾ ಕಾರ್ಯಕರ್ತೆಯರು ಕೈಗೊಂಡಿದ್ದಾರೆ. ಬೆಳಗಾವಿಯಿಂದ ಇದರಲ್ಲಿ ಸುಮಾರು 3 ಸಾವಿರ ಆಶಾ ಕಾರ್ಯಕರ್ತೆಯರು ಭಾಗಿಯಾಗಲಿದ್ದಾರೆ.

ಇಂದು ಬೆಳಗಾವಿಯ ಡಾ. ಅಂಬೇಡ್ಕರ ಉದ್ಯಾನದಲ್ಲಿ ಎಐಟಿಯುಸಿಯ ಪೂರ್ವಭಾವಿ ಸಭೆ ನಡೆಯಿತು. ಈ ಕುರಿತು ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಗೀತಾ ಶಶಿಕಾಂತ ರಾಯಗೋಳ ಇನ್ ನ್ಯೂಸಗೆ ಹೆಚ್ಚಿನ ಮಾಹಿತಿಯನ್ನು ನೀಡಿದ್ದಾರೆ. 

ಈ ವೇಳೆ ಜಿಲ್ಲಾಧ್ಯಕ್ಷ ಲಕ್ಷ್ಮಣ ಜಡಗಣ್ಣನ್ನವರ, ಜಿಲ್ಲಾ ಉಪಾಧ್ಯಕ್ಷ ಗೀತಾ ಅಂಗಡಿ ಸೇರಿದಂತೆ ತಾಲೂಕಿನ ಸದಸ್ಯರು ಭಾಗಿಯಾಗಿದ್ಧರು.


Spread the love

About Laxminews 24x7

Check Also

ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನದಿಂದ ಸ್ವಾತಂತ್ರ್ಯ ದಿನಾಚರಣೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ: ಸಂತೋಷ್ ಮಠಪತಿ

Spread the love ಬೆಳಗಾವಿ: ಪ್ರಾಥಮಿಕ ಹಂತದಲ್ಲೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ, ದೇಶದ ಉತ್ತಮ ನಾಗರಿಕನನ್ನಾಗಿ ಮಾಡುವ ಜವಾಬ್ದಾರಿ ಪೋಷಕರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ