Breaking News

ಕರ್ನಾಟಕ ಲೋಕಸೇವಾ ಆಯೋಗದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ಯಾವುದೇ ಗೊಂದಲವಿಲ್ಲದೆ ನಡೆದಿದೆ.

Spread the love

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ಸುಸೂತ್ರವಾಗಿ ಜರುಗಿದೆ. ಇಂದು ಪರೀಕ್ಷಾ ಕೇಂದ್ರದ ಸುತ್ತಮುತ್ತ ಪೊಲೀಸರು ಸೇರಿದಂತೆ ಗುಪ್ತಚರ ಸಿಬ್ಬಂದಿಗಳನ್ನು ನೇಮಕ ಮಾಡಿ ಯಾವುದೇ ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸಲಾಗಿತ್ತು.

ಕೆಪಿಎಸ್‌ಸಿ

ರಾಜ್ಯದ 204 ಸರ್ಕಾರಿ, 189 ಅನುದಾನಿತ ಹಾಗೂ 161 ಖಾಸಗಿ ಶಾಲಾ – ಕಾಲೇಜುಗಳಲ್ಲಿ ಪರೀಕ್ಷೆ ನಡೆದಿದ್ದು, ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೆ ಪರೀಕ್ಷೆ ಒಂದು ಹಾಗೂ ಮಧ್ಯಾಹ್ನ 2 ರಿಂದ 4ರ ವರೆಗೆ ಎರಡನೇಯ ಪರೀಕ್ಷೆ ಯಾವುದೇ ಗೊಂದಲವಿಲ್ಲದಂತೆ ನಡೆದಿದೆ ಎಂದು ರಾಜ್ಯ ಲೋಕಸೇವಾ ಆಯೋಗ ತಿಳಿಸಿದೆ.

ಈ ಬಾರಿ ಕೆಪಿಎಸ್‌ಸಿ ವೆಬ್​​ಸೈಟ್‌ನಿಂದ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಗುರುತಿನ ಚೀಟಿಯೊಂದಿಗೆ ಪರೀಕ್ಷೆಗೆ ಹಾಜರಾಗಬೇಕಿತ್ತು. ಮೊಬೈಲ್, ಬ್ಲೂಟೂತ್, ಸ್ಮಾರ್ಟ್‌ ವಾಚ್ ಸೇರಿದಂತೆ ಹಲವು ಎಲೆಕ್ಟ್ರಾನಿಕ್ ವಸ್ತುಗಳನ್ನು ನಿಷೇಧಿಸಲಾಗಿತ್ತು. ಶೂ, ಕಾಲಚೀಲ ಧರಿಸುವುದು, ತುಂಬುತೋಳಿನ ಶರ್ಟ್ ಧರಿಸುವುದನ್ನು ಕೂಡ ನಿಷೇಧಿಸಲಾಗಿತ್ತು. ಪರೀಕ್ಷೆಗೆ ಸಾಮಾನ್ಯ ಚಪ್ಪಲಿ ತೊಟ್ಟು ಬರುವಂತೆ ಸೂಚಿಸಲಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ