Breaking News

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾರೂ ಸಹ ದುರ್ವರ್ತನೆ ಮಾಡುವಂತಿಲ್ಲ;D.C.M.

Spread the love

ಬೆಂಗಳೂರು: ”ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾರೂ ಸಹ ದುರ್ವರ್ತನೆ ಮಾಡುವಂತಿಲ್ಲ. ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದನ್ನು ಮನವಿ ಎಂದಾದರೂ ಪರಿಗಣಿಸಿ, ಇಲ್ಲವೇ ಎಚ್ಚರಿಕೆ ಎಂದಾದರೂ ಪರಿಗಣಿಸಿ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್​ ಸಂದೇಶ ರವಾನಿಸಿದರು.

ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 7 ದಿನ ಶೋಕಾಚರಣೆ ಘೋಷಣೆ ಮಾಡಿದ್ದು, ಸರ್ಕಾರಿ ಕಾರ್ಯಕ್ರಮ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನು ಮಾತ್ರ ಆಚರಿಸುತ್ತಿಲ್ಲ. ಖಾಸಗಿ ಕಾರ್ಯಕ್ರಮಗಳಲ್ಲಿ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಹೀಗಾಗಿ, ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಿಕೊಳ್ಳಬಹುದು” ಎಂದರು.


Spread the love

About Laxminews 24x7

Check Also

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ

Spread the love ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ