Breaking News

ದಾಬಸ್ ಪೇಟೆ ಬಳಿ ಸರಣಿ ಅಪಘಾತ: ಓರ್ವ ಸಾವು, ಹಲವರಿಗೆ ಗಾಯ

Spread the love

ನೆಲಮಂಗಲ: ಇಲ್ಲಿಯ ದಾಬಸ್ ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ಇಂದು ಬೆಳಂಬೆಳಗ್ಗೆ ಸರಣಿ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ. ವೀರಣ್ಣ(55) ಮೃತ ದುರ್ದೈವಿ.

ದಾಬಸ್ ಪೇಟೆಯ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ಇಂದು ಬೆಳಗ್ಗೆ ಈ ಸರಣಿ ಅಪಘಾತ ಸಂಭವಿದೆ. ಕೈಗಾರಿಕಾ ಪ್ರದೇಶದ ಹೆಬ್ಬಾಗಿಲು ಮುಂಭಾಗದಲ್ಲಿ ಪ್ಯಾಸೆಂಜರ್ ಆಟೋ, ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತವಾಗಿದ್ದು, ಘಟನೆಯಲ್ಲಿ ವೀರಣ್ಣ ಸ್ಥಳದಲ್ಲೇ ಮೃತಪಟ್ಟರೆ, ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿ ಸೇರಿದಂತೆ ಹಲವರು ಗಾಯಗೊಂಡಿದ್ದು, ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ರಸ್ತೆ ಪಕ್ಕ ನರಳಾಡುತ್ತಿದ್ದ ಪ್ರಯಾಣಿಕರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ