Breaking News

ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ:ಡಿ. ಕೆ ಶಿ

Spread the love

ಬೆಂಗಳೂರು : ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ತಿಳಿಸಿದರು.

ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯದಮವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿಲ್ಲ. ಆತ್ಮಹತ್ಯೆ ಪತ್ರದಲ್ಲಿ ಅವರ ಹೆಸರು ಯಾರೂ ಬರೆದಿಲ್ಲ. ಬೇರೆಯವರ ಮೇಲೆ ಆರೋಪ ಮಾಡಿದಾಕ್ಷಣ ಇವರು ರಾಜೀನಾಮೆ ನೀಡಲು ಸಾಧ್ಯವಿಲ್ಲ. ಪ್ರಿಯಾಂಕ್ ಖರ್ಗೆ ಅವರ ಪ್ರಾಮಾಣಿಕತೆ ಬಗ್ಗೆ ನಮಗೆ ಗೊತ್ತಿದೆ. ಗುತ್ತಿಗೆದಾರನ ಸಾವಿನ ಬಗ್ಗೆ ಕಾನೂನು ಪ್ರಕಾರ ತನಿಖೆ ನಡೆಯುತ್ತದೆ

ಎಂದರು.ವಿಜಯೇಂದ್ರ, ಯಡಿಯೂರಪ್ಪ ಫೋಟೋ ಬಿಡುಗಡೆ ಮಾಡಲೇ : ಸಾವಿಗೆ ಕಾರಣವಾಗಿರುವ ಆರೋಪ ಹೊತ್ತಿರುವ ರಾಜು ಎಂಬುವರು ನಿಮ್ಮ ಜತೆ, ಸಿಎಂ, ಪ್ರಿಯಾಂಕ್ ಖರ್ಗೆ ಅವರ ಜತೆ ಇರುವ ಫೋಟೋಗಳನ್ನು ವಿಜಯೇಂದ್ರ ಅವರು ಬಿಡುಗಡೆ ಮಾಡಿರುವ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ನನ್ನ ಜೊತೆ ವಿಜಯೇಂದ್ರ, ಯಡಿಯೂರಪ್ಪ ಅವರು ಇರುವ ಫೋಟೋಗಳಿವೆ. ನಮ್ಮ ಮನೆಗೆ ಬಂದವರು, ಮದುವೆ ಕಾರ್ಯಕ್ರಮಕ್ಕೆ ಹೋದಾಗ ಅನೇಕರು ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುತ್ತಾರೆ. ವಿಜಯೇಂದ್ರ, ಯಡಿಯೂರಪ್ಪ ಅವರು ಕ್ರಿಮಿನಲ್, ರೌಡಿಗಳು ಸೇರಿದಂತೆ ಯಾರೆಲ್ಲರ ಜತೆ ಫೋಟೋ ತೆಗೆಸಿಕೊಂಡಿದ್ದಾರೆ ಎಂದು ನಾನು ಬಿಡುಗಡೆ ಮಾಡಲೇ? ಎಂದು ಡಿಕೆಶಿ ಪ್ರಶ್ನಿಸಿದರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ