Breaking News

ಕರ್ನಾಟಕ ಬಂದ್ ಗೆ ರಾಜ್ಯದ ಹಲವೆಡೆ ನೀರಸ ಪ್ರತಿಕ್ರಿಯೆಬಸ್ ಮೇಲೆ ಕಲ್ಲು ತೂರಾಟ

Spread the love

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯದ ಹಲವೆಡೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹಲವೆಡೆಗಳಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ ತೀವ್ರಗೊಂಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಹೊಸೂರು ರಸ್ತೆಯ ಹಳೇ ಚಂದಾಪುರ ಬಳಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿ ಪರಾರಿಯಾಗಿದ್ದಾರೆ. ಕೆ.ಆರ್.ಪುರಂ ನಲ್ಲಿ ಮತ್ತೊಂದು ಬಸ್ ಗೆ ಕಲ್ಲು ತೂರಿದ್ದಾರೆ.

ಟೌನ್ ಹಾಲ್ ಬಳಿ ಪ್ರತಿಭಟನೆಗೆ ಸೇರಿದ್ದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು, ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

Spread the loveಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ