ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ದಯಪಾಲಿಸಿದೆ ಆತ್ಮಹತ್ಯೆ ಭಾಗ್ಯ
ಸರ್ಕಾರದ ಕುಮ್ಮಕ್ಕಿನಿಂದ ಆತ್ಮಹತ್ಯೆಗಳು ದಿನೇ ದಿನೇ ಹೆಚ್ಚಳ
ಹಿಂದೆಂದೂ ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ನೋಡಿಲ್ಲ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ
ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಆತ್ಮಹತ್ಯೆ ಭಾಗ್ಯ ದಯಪಾಲಿಸಿದೆ. ಸರ್ಕಾರದ ಕುಮ್ಮಕ್ಕಿನಿಂದ ಆತ್ಮಹತ್ಯೆಗಳು ದಿನೇ ದಿನೇ ಹೆಚ್ಚಳವಾಗಿವೆ. ಹಿಂದೆಂದೂ ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ನಾವು ನೋಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಆತ್ಮಹತ್ಯೆ ಭಾಗ್ಯ ದಯಪಾಲಿಸಿದೆ. ಮೊದಲ ಆತ್ಮಹತ್ಯೆ ವಾಲ್ಮೀಕಿ ನಿಗಮದ ಅಕೌಂಟೆಂಟ್ ಚಂದ್ರಶೇಖರ್, ಮೇ 24 ರಂದು ಆತ್ಮಹತ್ಯೆ ಮಾಡಿಕೊಂಡ್ರು. ನವೆಂಬರ್ 04 ರಂದು ರುದ್ರಣ್ಣ ಯಡವಣ್ಣವರ್ ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ್ರು, ಮೂರನೇ ಪ್ರಕರಣ ದಾವಣಗೆರೆಯಲ್ಲಿ, ಗುತ್ತಿಗೆ ಸಿಗದೇ ಗುತ್ತಿಗೆದಾರರೊಬ್ಬರ ಆತ್ಮಹತ್ಯೆ ಮಾಡಿಕೊಂಡರು. ಯಾದಗಿರಿ ಠಾಣೆ ಪಿಎಸ್ಐ ಪರಶುರಾಮ್, ಸ್ಥಳೀಯ ಶಾಸಕರ ಪುತ್ರನ ಒತ್ತಡ ತಡೆಯದೇ ಆತ್ಮಹತ್ಯೆ, ಈಗ ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಗಳು ದೇಶಾದ್ಯಂತ ಸುದ್ದಿಯಾಗಿವೆ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಸರ್ಕಾರಿ ಪ್ರಾಯೋಜಿತ ಆತ್ಮಹತ್ಯೆಗಳು ನಡೀತಿದೆ. ಸರ್ಕಾರದ ಕುಮ್ಮಕ್ಕಿನಿಂದ ಆತ್ಮಹತ್ಯೆಗಳು ದಿನೇ ದಿನೇ ಹೆಚ್ಚಳವಾಗಿವೆ. ಸರ್ಕಾರ, ಸಚಿವರ ಕುಮ್ಮಕ್ಕು, ಕಾಂಗ್ರೆಸ್ ಶಾಸಕ ಕುಮ್ಮಕ್ಕಿನಿಂದ ಆತ್ಮಹತ್ಯೆಗಳು ನಡೀತಿವೆ. ಹಿಂದೆಂದೂ ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ನಾವು ನೋಡಿಲ್ಲ ಎಂದು ಹೇಳಿದರು.
Laxmi News 24×7