Breaking News

ಸಿ. ಟಿ. ರವಿ ಬಂಧನ ಪ್ರಕರಣದಲ್ಲಿ ಸತ್ಯಶೋಧನೆ ನಡೆಸುವಂತೆ, ಥಾವರ್ಚಂದ್ ಗೆಹ್ಲೋಟ್ಗೆ ದೂರು; ಛಲವಾದಿ ನಾರಾಯಣ ಸ್ವಾಮಿ

Spread the love

ಪರಿಷತ್‌ ಸದಸ್ಯರಾದ ಶ್ರೀ ಸಿ. ಟಿ. ರವಿ ಬಂಧನ ಪ್ರಕರಣದಲ್ಲಿ ಸತ್ಯಶೋಧನೆ ನಡೆಸುವಂತೆ, ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್‌ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ನಿರ್ದೇಶನದಂತೆ ಸಂವಿಧಾನ ಮತ್ತು ಕಾನೂನು ಉಲ್ಲಂಘನೆ ಮಾಡಿ ಪೊಲೀಸ್‌ ಇಲಾಖೆ ಮೂಲಕ ಅಧಿಕಾರದ ದುರ್ಬಳಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕ್ರಮಕೈಗೊಳ್ಳುವಂತೆ ಇಂದು ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದ ಬಿಜೆಪಿ ನಿಯೋಗವು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಗೆ ದೂರು ಸಲ್ಲಿಸಿತು.

ನಿಯೋಗದಲ್ಲಿ ಪರಿಷತ್‌ ಸದಸ್ಯರಾದ ಶ್ರೀ ಸಿ. ಟಿ. ರವಿ, ಶ್ರೀ ಎನ್.‌ ರವಿಕುಮಾರ್‌, ಶ್ರೀ ಕೇಶವ ಪ್ರಸಾದ್‌, ಶ್ರೀ ಕೆ. ಎಸ್.‌ ನವೀನ್‌, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ ಮತ್ತು ಪ್ರಮುಖರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ