Breaking News

ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಗೆ ಭದ್ರತೆ ನೀಡಿ; ಶ್ರೀರಾಮಸೇನೆ ಜಿಲ್ಲಾಧಿಕಾರಿಗಳಿಗೆ ಮನವಿ

Spread the love

ಬೆಳಗಾವಿ: ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಗೆ ಭದ್ರತೆ ನೀಡಿ. ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಗೆ ಭದ್ರತೆ ಹಾಗೂ ಕೊಲೆ ಸಂಚು ರೂಪಿಸಿದ ವ್ಯಕ್ತಿಯನ್ನು ಬಂಧಿಸಬೇಕು ಹಾಗೂ ಷಡ್ಯಂತ್ರದ ರುವಾರಿ ಸಚಿವ ಪ್ರಿಯಾಂಕಾ ಖರ್ಗೆ ಅವರ ಪಿ.ಎ. ಆಗಿದ್ದು, ಸಚಿವ ಪ್ರಿಯಾಂಕಾ ಖರ್ಗೆ ರಾಜೀನಾಮೆ ನೀಡಲೇಬೇಕೆಂದು ಬೆಳಗಾವಿಯ ಶ್ರೀರಾಮಸೇನೆ ಆಗ್ರಹಿಸಿದೆ.

ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಗೆ ಭದ್ರತೆ ಹಾಗೂ ಕೊಲೆ ಸಂಚು ರೂಪಿಸಿದ ವ್ಯಕ್ತಿಯನ್ನು ಬಂಧಿಸಬೇಕು ಹಾಗೂ ಷಡ್ಯಂತ್ರದ ರುವಾರಿ ಸಚಿವ ಪ್ರಿಯಾಂಕಾ ಖರ್ಗೆ ಅವರ ಪಿ.ಎ. ಆಗಿದ್ದು, ಸಚಿವ ಪ್ರಿಯಾಂಕಾ ಖರ್ಗೆ ರಾಜೀನಾಮೆ ನೀಡಲೇಬೇಕೆಂದು ಆಗ್ರಹಿಸಿ ಮಂಗಳವಾರ ಶ್ರೀರಾ‌ಮ್ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕಲಬುರ್ಗಿ ಜಿಲ್ಲಾ ಜೀವರ್ಗಿ ತಾಲ್ಲೂಕಿನ ಸುಕ್ಷೇತ್ರ ಪೂಜ್ಯ ಕರುಣೆಶ್ವರ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಕೊಲೆ ಮಾಡುವ ಬಗ್ಗೆ ಇತ್ತೀಚಿಗೆ ಆತ್ಮಹತ್ಯೆ ಮಾಡಿ ಕೊಂಡ ಕಾಂಟ್ರಾಕ್ಟರ್ ಮರಣ ಪತ್ರದಲ್ಲಿ ಉಲ್ಲೇಖವಾಗಿದೆ. ಕಲಬುರ್ಗಿ ಜಿಲ್ಲಾ ಉಸ್ತುವಾರಿ ಮಂತ್ರಿ ಪ್ರಿಯಾಂಕ್ ಖರ್ಗೆ ಅಪ್ತ ರಾಜು ಅನ್ನುವ ವ್ಯಕ್ತಿ ಈ ಹೇಯ ಕೊಲೆ ಬಗ್ಗೆ, ಯೋಜನೆ ನಿರೂಪಿಸಿದ್ದರ ಬಗ್ಗೆ ಉಲ್ಲೇಖವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಸ್ವಾಮೀಜಿಗೆ ತಕ್ಷಣವೇ ರಕ್ಷಣೆ ನೀಡಬೇಕು. ಕೊಲೆ ಸಂಚು ರೂಪಿಸಿದ ವ್ಯಕ್ತಿ ಬಂಧನವಾಗಬೇಕು ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಅನಿವಾರ್ಯವೆಂದು ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ವಿಠ್ಠಲ ಗಡ್ಡಿ ಎಚ್ಚರಿಕೆ ‌ನೀಡಿದರು.

ಈ ವೇಳೆ ಶ್ರೀರಾಮಸೇನೆ ಬೆಳಗಾವಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗಿಯಾಗಿದ್ಧರು.


Spread the love

About Laxminews 24x7

Check Also

ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ

Spread the loveಚಿಕ್ಕೋಡಿ: “ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ