ಬೆಂಗಳೂರು: ಹೊಸ ವರ್ಷದ ಮರು ದಿನವೇ ರಾಜ್ಯದ ಜನರಿಗೆ ಸರ್ಕಾರ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಬಸ್ ಪ್ರಯಾಣ ದರ ಶೇಕಡಾ 15ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬಸ್ ಟಿಕೆಟ್ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿದೆ. ಸಾರಿಗೆ ದರ ಏರಿಕೆಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.