Breaking News

ಬೆಳಗಾವಿಯಲ್ಲಿ ಸಂಭಾಜಿ ಮೂರ್ತಿ ಉದ್ಘಾಟನೆ ವಿಚಾರವು ವಿವಾದಕ್ಕೆ ಕಾರಣವಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ

Spread the love

ಬೆಳಗಾವಿ: ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ವಿಚಾರ ಈಗ ಬೆಳಗಾವಿಯಲ್ಲಿ ವಿವಾದದ ಸ್ವರೂಪ ಪಡೆದಿದೆ. ಶಾಸಕ ಅಭಯ್ ಪಾಟೀಲ್ ಮತ್ತು ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆ ಅಧ್ಯಕ್ಷ ರಮಾಕಾಂತ ಕೊಂಡೂಸ್ಕರ್ ಬೆಂಬಲಿಗರ ಮಧ್ಯೆ ಜಟಾಪಟಿ ಏರ್ಪಟ್ಟಿದೆ.

ನಗರದ ಅನಗೋಳದ ಧರ್ಮವೀರ ಸಂಭಾಜಿ ವೃತ್ತದಲ್ಲಿ 21 ಅಡಿ ಎತ್ತರದ ಪ್ರತಿಮೆಯನ್ನು ಜನವರಿ 5ರಂದು ಲೋಕಾರ್ಪಣೆ ಮಾಡುವ ಕುರಿತು ಮೇಯರ್ ಸವಿತಾ ಕಾಂಬಳೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.SAMBHAJI STATUE INAUGURATION ISSUE

ಆದರೆ, ಅದಕ್ಕೂ ಮೊದಲೇ ಗುರುವಾರ ಬೆಳಗ್ಗೆಯೇ ಪ್ರತಿಮೆ ಅನಾವರಣ ಸ್ಥಳಕ್ಕೆ ಮೇಯರ್ ಸವಿತಾ ಕಾಂಬಳೆ, ಉಪಮೇಯರ್ ಆನಂದ ಚವ್ಹಾಣ್ ಸೇರಿ ಮುಂತಾದವರು ಆಗಮಿಸಿದ್ದರು. ಅಲ್ಲದೇ, ಪ್ರತಿಮೆಯ ಸ್ಥಳದಲ್ಲಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆ ಕಾರ್ಯಕರ್ತರು ಮತ್ತು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ. ಇಂಥ ಸಂದರ್ಭದಲ್ಲಿ ಪ್ರತಿಮೆ ಉದ್ಘಾಟಿಸುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಈ ಕುರಿತು ಮೇಯರ್ ಸವಿತಾ ಕಾಂಬಳೆ ಪ್ರತಿಕ್ರಿಯಿಸಿದ್ದು, ”ಪೂರ್ವ ನಿಗದಿಯಂತೆ ಸಂಭಾಜಿ ಮಹರಾಜರ ಪುತ್ಥಳಿ ಉದ್ಘಾಟನೆ ಮಾಡಲಾಗುತ್ತಿದೆ. ಸ್ಥಳೀಯರಿಗೂ ಆಹ್ವಾನ ನೀಡಲಾಗಿತ್ತು. ನನಗೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ಪುತ್ಥಳಿ ಉದ್ಘಾಟನೆಗೆ ದಿನಾಂಕ ನಿಗದಿ ಮಾಡಲಾಗಿತ್ತು.‌ ಆ ದಿನಾಂಕದಂದೇ ಪ್ರತಿಮೆ ಉದ್ಘಾಟಿಸಲಾಗುವುದು. ಈಗ ಪ್ರತಿಮೆ ಕೆಳಭಾಗದಲ್ಲಿರುವ ಸಭಾಭವನದಲ್ಲಿ ಪೂಜೆ ಮಾತ್ರ ನೆರವೇರಿಸುತ್ತಿದ್ದೇವೆ. ಯಾರೂ ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು” ಎಂದು ಹೇಳಿದರು.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ