Breaking News

ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಶನಿವಾರ ರೈತರೊಂದಿಗೆ 5ನೇ ಸುತ್ತಿನ ಮಾತುಕತೆ

Spread the love

ನವದೆಹಲಿ: ಕೃಷಿ ಮಸೂದೆ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಶನಿವಾರ ರೈತರೊಂದಿಗೆ 5ನೇ ಸುತ್ತಿನ ಮಾತುಕತೆ ನಡೆಯಲಿದ್ದು, ಈ ನಡುವಲ್ಲೇ ಕೇಂದ್ರ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ರಾಜಧಾನಿಯಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿವಾಸಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್,  ಗೋಯಲ್ ಮತ್ತು ನರೇಂದ್ರ ಸಿಂಗ್ ತೋಮರ್ ಅವರು ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಕೇಂದ್ರ ಕೃಷಿ ಸಚಿವ ತೋಮರ್ ಅವರು, ರೈತರೊಂದಿಗೆ ಇಂದು ಮಧ್ಯಾಹ್ನ 2 ಗಂಟೆಗೆ ಮಾತುಕತೆ ನಡೆಯಲಿದೆ. ಇಂದು ನಡೆಯುವ ಮಾತುಕತೆ ವೇಳೆ ರೈತರಿಂದ ಧನಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Spread the loveಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ