ಕೆ.ಎಸ್.ಆರ್.ಟಿ.ಸಿ. ಬಸ್ ದರ ಶೇ.15 ರಷ್ಟು ಏರಿಕೆ
ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಅನುಮೋದನೆ
ಕೆ.ಎಸ್.ಆರ್.ಟಿ.ಸಿ. ಬಸ್ ದರ ಶೇ.15 ರಷ್ಟು ಏರಿಕೆಸಿಎಂ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಅನುಮೋದನೆಹೊಸ ವರ್ಷದ ಆರಂಭದಲ್ಲೇ ಶಾಕ್ ನೀಡಿದ ಸರ್ಕಾರ4 ನಿಗಮಗಳಿಂದ ಸಲ್ಲಿಸಲಾಗಿತ್ತು ದರ ಏರಿಕೆಗೆ ಪ್ರಸ್ತಾವ
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಆ ಮೂಲಕ ಕರ್ನಾಟಕದ ಜನರಿಗೆ ಹೊಸ ವರ್ಷಕ್ಕೆ ಸರ್ಕಾರ ಬಿಗ್ ಶಾಕ್ ನೀಡಿದೆ.
ಹೊಸ ವರ್ಷಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಜನರಿಗೆ ಬೆಲೆ ಏರಿಕೆ ಬರೆ ಕೊಟ್ಟಿದೆ. ಸಾರ್ವಜನಿಕ ಸಾರಿಗೆ ಪ್ರಯಾಣವು ಮತ್ತಷ್ಟು ದುಬಾರಿ ಆಗಲಿದೆ. ನಾಲ್ಕು ನಿಗಮಗಳ ಬಹುದಿನಗಳ ಬೇಡಿಕೆ ಈಡೇರಿಸಲು ಮುಂದಾಗಿರುವ ಸರ್ಕಾರ ಬಸ್ ಟಿಕೆಟ್ ದರ ಏರಿಕೆಗೆ ಅಸ್ತು ಎಂದಿದೆ. ಬಸ್ ಪ್ರಯಾಣವನ್ನು ಶೇಕಡಾ 15ರಷ್ಟು ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿ ಅನುಮೋದನೆ ನೀಡಿದೆ.
ಶಕ್ತಿ ಯೋಜನೆ, ಡೀಸೆಲ್ ದರ ಏರಿಕೆ ಸೇರಿದಂತೆ ಇತ್ಯಾದಿ ಕಾರಣಗಳಿಂದ ನಷ್ಟಕ್ಕೆ ಸಿಲುಕಿರುವ ಸರ್ಕಾರ ಈಗ ಕೊನೆಗೆ ಅನಿವಾರ್ಯವಾಗಿ ಬಸ್ ಟಿಕೆಟ್ ದರವನ್ನು 15% ಏರಿಕೆ ಮಾಡಿದೆ. ಬಿಎಂಟಿಸಿ ಬಸ್ ದರ ಏರಿಕೆಯಾಗಿ 10 ವರ್ಷ ಆಗಿದ್ದರೆ ಕೆಎಸ್‌ಆರ್‌ಟಿಸಿ ದರ ಏರಿಕೆಯಾಗಿ 5 ವರ್ಷವಾಗಿದೆ. ಹೀಗಾಗಿ ಇಂದಿನ ಕ್ಯಾಬಿನೆಟ್ ಸಭೆಯ ಬಳಿಕ ಸಚಿವ ಎಚ್.ಕೆ. ಪಾಟೀಲ್ ಮಾಹಿತಿಯನ್ನು ನೀಡಿದರು. ನಮ್ಮ ಸರ್ಕಾರದ ಸಾಧನೆಗಳನ್ನು ಸಹಿಲಾಗದವರು.
ಸರ್ಕಾರದ ಖಜಾನೆ ಖಾಲಿಯಾಗಿದೆ. ಸಾಲ ಸಿಗಲ್ಲವೆಂಬ ಆರೋಪಗಳನ್ನು ಹೊರಿಸುತ್ತಾರೆ. ಆದರೇ ಸಾಧಕಭಾದಕ ಮತ್ತು ಸಾಮರ್ಥ್ಯಗಳನ್ನು ಅರಿತೇ ಸರ್ಕಾರ ಎಲ್ಲ ನಿರ್ಣಯಗಳನ್ನು ಕೈಗೊಳ್ಳುತ್ತದೆ ಎಂದರು.