Breaking News

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಡಿವೈಎಸ್​ಪಿ ಸಸ್ಪೆಂಡ್

Spread the love

ತುಮಕೂರು, (ಜನವರಿ 03): ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ತಮ್ಮ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಇಂದು (ಜನವರಿ 03) ಡಿಜಿ ಆದೇಶ ಹೊರಡಿಸಿದ್ದಾರೆ.

 

ಕಚೇರಿಯಲ್ಲೇ ಮಹಿಳೆ ಜತೆ ರಾಸಲೀಲೆ: ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಡಿವೈಎಸ್​ಪಿ ಅಮಾನತು

ಘಟನೆ ಹಿನ್ನೆಲೆ

ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು.

ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ. ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ.

ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾರೆ.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ