Breaking News

ಸರ್ಕಾರದ ಲಿಂಗತ್ವ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರಲು ಹತ್ತು ಹಲವು ಯೋಜನೆ

Spread the love

ಹಾವೇರಿ : ರಾಜ್ಯ ಸರ್ಕಾರ ರಾಜ್ಯದ ವಿವಿಧೆಡೆ 50 ಅಕ್ಕ ಕೆಫೆ ನಿರ್ಮಿಸಿದೆ. ಜಿಲ್ಲೆಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಿರ್ಮಾಣಗೊಂಡಿರುವ ಅಕ್ಕ ಕೆಫೆಯನ್ನು ಲಿಂಗತ್ವ ಅಲ್ಪಸಂಖ್ಯಾತರೇ ನಿರ್ವಹಣೆ ಮಾಡಲಿದ್ದಾರೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ ನೇತೃತ್ವದಲ್ಲಿ ನಡೆಯುವ ಅಕ್ಕ ಕೆಫೆ ನಾಳೆಯಿಂದ ಪ್ರಾರಂಭವಾಗಲಿದೆ.

ಹಾವೇರಿಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸುಮಾರು 15 ಲಕ್ಷ ರೂಪಾಯಿ ಅನುದಾನದಲ್ಲಿ ಅಕ್ಕ ಕೆಫೆಯನ್ನ ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿ ಪ್ರಥಮ ಭಾರಿಗೆ ಲಿಂಗತ್ವ ಅಲ್ಪಸಂಖ್ಯಾತರು ಇದರ ನಿರ್ವಹಣೆ ಮಾಡುತ್ತಾರೆ. ಈ ಕೆಫೆಯಲ್ಲಿ ಅಡುಗೆ ಮಾಡುವುದು, ಸರ್ವ್ ಮಾಡೋದು ಸೇರಿದಂತೆ ಎಲ್ಲವೂ ಸಹ ಅಕ್ಕ ಕೆಫೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರೇ ಮಾಡುತ್ತಾರೆ.

ಅಕ್ಕ ಕೆಫೆಯಲ್ಲಿ 15 ಜನರು ಲಿಂಗತ್ವ ಅಲ್ಪಸಂಖ್ಯಾತರು ಕೆಲಸ ಮಾಡಲಿದ್ದಾರೆ. ಉತ್ತರ ಕರ್ನಾಟದ ಶೈಲಿಯ ಊಟವನ್ನ ಮಾಡಲಾಗುತ್ತಿದೆ. ಸಾವಯವ ಊಟಕ್ಕೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಜಿಲ್ಲಾಡಳಿತ ಲಿಂಗತ್ವ ಅಲ್ಪಸಂಖ್ಯಾತರನ್ನ ಗುರುತಿಸಿ ಈ ಕಾರ್ಯದ ಜವಾಬ್ದಾರಿ ನೀಡಿದೆ.

ಭಿಕ್ಷಾಟನೆ ಮತ್ತು ವೇಶ್ಯಾವಾಟಿಕೆಯಿಂದ ಬದುಕು ಕಟ್ಟಿಕೊಳ್ಳುವಂತವರು ಎಂದು ತಿರಸ್ಕರಿಸುತ್ತಿದ್ದವರನ್ನು ಸಮಾಜಮುಖಿಗಳನ್ನಾಗಿ ಮಾಡಬೇಕು ಅನ್ನೋ ಉದ್ದೇಶದಿಂದ ಅಕ್ಕ ಕೆಫೆ ನಿರ್ವಹಣೆ ಅವರಿಗೆ ನೀಡಲಾಗಿದೆ. ಅಕ್ಕ ಕೆಫೆ ನಾಳೆಯಿಂದ ಉದ್ಘಾಟನೆಯಾಗಲಿದೆ. ಹಾವೇರಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ತಮಗೆ ಈ ಅವಕಾಶ ನೀಡಿದ್ದಕ್ಕೆ ಧನ್ಯವಾದ ಅರ್ಪಿಸಿದ್ದಾರೆ.


Spread the love

About Laxminews 24x7

Check Also

ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು

Spread the loveಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್​ 1 ರಿಂದ ಜಿಲ್ಲೆಯಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ