Breaking News

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಣ ರಾಜಕೀಯ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ರಾಜ್ಯದ ನಾಯಕರೊಂದಿಗೆ ಸುದೀರ್ಘ ಚರ್ಚೆ

Spread the love

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿರುವ ಬಣ ರಾಜಕೀಯವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ಬಿಜೆಪಿ ನಾಯಕರುಗಳ ಜೊತೆ ಶುಕ್ರವಾರ ಚರ್ಚೆ ನಡೆಸಿದ್ದಾರೆ.

ಬೆಂಗಳೂರಿಗೆ ಆಗಮಿಸಿದ್ದ ಜೆ.ಪಿ.ನಡ್ಡಾ, ಬಿಜೆಪಿಯ ಬಣ ರಾಜಕೀಯಕ್ಕೆ ಅಂತ್ಯ ಹಾಡಿ ಎಲ್ಲ ಸಮಸ್ಯೆಗಳಿಗೂ ಪರಿಹಾರ ಹುಡುಕಲು ಏನೆಲ್ಲಾ ಮಾಡಬೇಕು, ಪಕ್ಷದ ಮಟ್ಟದಲ್ಲಿ ಯಾವ ತೀರ್ಮಾನಗಳು ಆಗಬೇಕು, ಯಾವ ರೀತಿ ಪಕ್ಷದಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂಬೆಲ್ಲ ವಿಚಾರವಾಗಿ ರಾಜ್ಯ ಬಿಜೆಪಿಯ ಪ್ರಮುಖ ಮುಖಂಡರ ಜತೆ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕುಮಾರಕೃಪಾ ಗೆಸ್ಟ್ ಹೌಸ್​​ನಲ್ಲಿ ಜೆ.ಪಿ. ನಡ್ಡಾ ಅವರನ್ನು ರಾಜ್ಯ ಬಿಜೆಪಿಯ ಹಲವು ನಾಯಕರು ಭೇಟಿ ಮಾಡಿ, ಪಕ್ಷದಲ್ಲಿನ ಬಣ ರಾಜಕೀಯದಿಂದ ಪಕ್ಷ ಸಂಘಟನೆಗೆ ತೊಂದರೆಯಾಗಿದೆ. ಪಕ್ಷದ ವರ್ಚಸ್ಸಿಗೂ ಧಕ್ಕೆಯಾಗಿದೆ. ಇದಕ್ಕೆ ಪರಿಹಾರ ದೊರಕಿಸಿ ಎಂಬ ಮನವಿ ಮಾಡಿದ್ದಾರೆ. ನಾಯಕರುಗಳ ಅಹವಾಲುಗಳನ್ನು ಆಲಿಸಿರುವ ಜೆ.ಪಿ.ನಡ್ಡಾ, ಬಣ ರಾಜಕೀಯಕ್ಕೆ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

JP NADDA VISITS KARNATAKA

ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ಜೆ.ಪಿ.ನಡ್ಡಾ ಅವರನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕರುಗಳಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರು ಭೇಟಿ ಮಾಡಿದ್ದರು. ವಿಮಾನ ನಿಲ್ದಾಣದ ವಿಐಪಿ ಲಾಂಜ್‌ನಲ್ಲೇ ನಡ್ಡಾ ಅವರು ಈ ನಾಯಕರುಗಳ ಜೊತೆ ಕೆಲ ಸಮಯ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು ಎಂದು ಗೊತ್ತಾಗಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ