ಹೆಬ್ಬಾಳಕರ್ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ನನ್ನ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗಾಗಿ ಕಳೆದ ಆರು ತಿಂಗಳ ಹಿಂದೆಯೇ ಎಲ್ಲರೂ ಸಹಮತದಿಂದ ಒಂದೇ ಹೆಸರು ಕಳಿಸಿದ್ದೇವೆ. ಶೀಘ್ರವೇ ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕವಾಗಲಿದೆ ಎಂದು ಪ್ರತಿಕ್ರಿಯಿಸಿದರು.
ಬೆಳಗಾವಿಯಲ್ಲಿ ನಡೆದ ಗಾಂಧಿ ಭಾರತ ಶತಮಾನೋತ್ಸವದಲ್ಲಿ ಸಮಿತಿಗಳನ್ನು ರಚಿಸಲಾಗಿತ್ತು. ಎಲ್ಲರೂ ತಮ್ಮ ತಮ್ಮ ಕೆಲಸ ಮಾಡಿದ್ದಾರೆ. ನಮಗೆ ಜನರನ್ನು ಸೇರಿಸುವ ಜವಾಬ್ದಾರಿ ಇತ್ತು. ಕೆಪಿಸಿಸಿ ಅಧ್ಯಕ್ಷರಾಗಿರುವುದರಿಂದ ಡಿ.ಕೆ. ಶಿವಕುಮಾರ ಅವರು ಶೋ ಆಗಿದ್ದಾರೆ ಅಷ್ಟೇ, ಹೀಗಾಗಿ ಅಧ್ಯಕ್ಷರು ಹೈಲೈಟ್ ಆಗುವುದು ಸ್ವಾಭಾವಿಕ. ಬೆಳಗಾವಿ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಸತೀಶ ಜಾರಕಿಹೊಳಿ ಸಮಜಾಯಿಷಿ ನೀಡಿದರು