Breaking News

ಕಟ್ಟಡದ ಮೇಲ್ಛಾವಣಿ ಸಿಮೆಂಟ್ ಪ್ಲಾಸ್ಟರಿಂಗ್ ಬಿದ್ದು ನಾಲ್ಕು ಮಕ್ಕಳು ಗಾಯ

Spread the love

ಕೋಲಾರ : ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಸಿಮೆಂಟ್ ಪ್ಲಾಸ್ಟರಿಂಗ್ ಬಿದ್ದು ನಾಲ್ಕು ಮಕ್ಕಳು ಗಾಯಗೊಂಡಿರುವ ಘಟನೆ ಬಂಗಾರಪೇಟೆ ತಾಲೂಕಿನ ದಾಸರಹೊಸಹಳ್ಳಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾರೊಬ್ಬರಿಗೂ ಪ್ರಾಣಾಪಾಯವಾಗಿಲ್ಲ. ಸಣ್ಣಪುಟ್ಟ ಗಾಯಗಳೊಂದಿಗೆ ಮಕ್ಕಳು ಚೇತರಿಸಿಕೊಂಡಿದ್ದಾರೆ.

ದಾಸರಹೊಸಹಳ್ಳಿಯ ಅಂಗನವಾಡಿಯ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರಿಂಗ್ ಬಿದ್ದಿರುವುದರಿಂದ ಅಂಗನವಾಡಿಯಲ್ಲಿದ್ದ ಏಳು ಮಕ್ಕಳಲ್ಲಿ ಲಿಖಿತ, ಪರಿಣಿತ, ಸಾನ್ವಿ, ಚರಿತಾಗೆ ಗಾಯಗಳಾಗಿದೆ.ದಾಸರಹೊಸಹಳ್ಳಿಯ ಬಾಲಸ್ನೇಹಿ ಅಂಗನವಾಡಿ ಕೇಂದ್ರ ಶಿಥಿಲಗೊಂಡಿತ್ತು. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆ ಹಲವು ಬಾರಿ ಇಲಾಖೆಯ ಮೇಲಧಿಕಾರಿಗಳಿಗೆ, ಗ್ರಾಮ ಪಂಚಾಯಿತಿಯವರಿಗೆ ಅಂಗನವಾಡಿ ಕೇಂದ್ರವನ್ನ ದುರಸ್ತಿ ಮಾಡಿಕೊಡುವಂತೆ ಮನವಿ ಮಾಡಿದ್ರೂ ಪ್ರಯೋಜನವಾಗಿಲ್ಲ. ಆದರೆ, ಇದೀಗ ಅಂಗನವಾಡಿ ಕೇಂದ್ರದ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರಿಂಗ್ ಬಿದ್ದು ಅಪಾಯ ತಂದೊಡ್ಡಿದೆ.


Spread the love

About Laxminews 24x7

Check Also

ಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ ಹೆಚ್ಚು.

Spread the loveಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ