ಮೈಸೂರು : ಇಲ್ಲಿನ ಹೆಚ್. ಡಿ ಕೋಟೆ ತಾಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿನ ಚರಂಡಿಯಲ್ಲಿ ನವಜಾತ ಶಿಶುವೊಂದು ಇಂದು ಪತ್ತೆಯಾಗಿದೆ. ಇದೀಗ ಮಗುವನ್ನ ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.![]()
ಬೆಳಗ್ಗೆ ಗ್ರಾಮಸ್ಥರು ತಮ್ಮ ಹೊಲಗಳಿಗೆ ಹೋಗುವ ಸಂದರ್ಭದಲ್ಲಿ ಚರಂಡಿಯಿಂದ ಮಗುವೊಂದು ಅಳುವ ಶಬ್ಧ ಕೇಳಿಸಿದೆ. ಕೂಡಲೇ ಗ್ರಾಮಸ್ಥರು ಸ್ಥಳೀಯ ಆಶಾ ಕಾರ್ಯಕರ್ತರಿಗೆ ಈ ವಿಚಾರ ತಿಳಿಸಿದ್ದಾರೆ. ತಕ್ಷಣ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ಥಳಕ್ಕೆ ಬಂದು ಮಗುವನ್ನ ಹೆಚ್. ಡಿ ಕೋಟೆ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.
ಈ ವಿಚಾರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹೆಚ್. ಡಿ ಕೋಟೆ ತಾಲೂಕು ಹಾಗೂ ಆರೋಗ್ಯ ತಾಲೂಕಾಧಿಕಾರಿಗಳಿಗೆ ತಿಳಿಸಿದ್ದು, ಶಿಶುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚೆಲುವಾಂಬ ಮಕ್ಕಳ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಹೆಚ್. ಡಿ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7