Breaking News

ಚರಂಡಿಯಲ್ಲಿ ನವಜಾತ ಶಿಶು ಪತ್ತೆ

Spread the love

ಮೈಸೂರು : ಇಲ್ಲಿನ ಹೆಚ್. ಡಿ ಕೋಟೆ ತಾಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿನ ಚರಂಡಿಯಲ್ಲಿ ನವಜಾತ ಶಿಶುವೊಂದು ಇಂದು ಪತ್ತೆಯಾಗಿದೆ. ಇದೀಗ ಮಗುವನ್ನ ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.Mother and Children's Hospital

ಬೆಳಗ್ಗೆ ಗ್ರಾಮಸ್ಥರು ತಮ್ಮ ಹೊಲಗಳಿಗೆ ಹೋಗುವ ಸಂದರ್ಭದಲ್ಲಿ ಚರಂಡಿಯಿಂದ ಮಗುವೊಂದು ಅಳುವ ಶಬ್ಧ ಕೇಳಿಸಿದೆ. ಕೂಡಲೇ ಗ್ರಾಮಸ್ಥರು ಸ್ಥಳೀಯ ಆಶಾ ಕಾರ್ಯಕರ್ತರಿಗೆ ಈ ವಿಚಾರ ತಿಳಿಸಿದ್ದಾರೆ. ತಕ್ಷಣ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ಥಳಕ್ಕೆ ಬಂದು ಮಗುವನ್ನ ಹೆಚ್. ಡಿ ಕೋಟೆ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ಈ ವಿಚಾರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹೆಚ್. ಡಿ ಕೋಟೆ ತಾಲೂಕು ಹಾಗೂ ಆರೋಗ್ಯ ತಾಲೂಕಾಧಿಕಾರಿಗಳಿಗೆ ತಿಳಿಸಿದ್ದು, ಶಿಶುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚೆಲುವಾಂಬ ಮಕ್ಕಳ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಹೆಚ್. ಡಿ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ