Breaking News

ಕೆಎಸ್​​ಆರ್​​ಟಿಸಿ ಆರೋಗ್ಯ ಯೋಜನೆಗೆ ಸಿಎಂ ಚಾಲನೆ

Spread the love

ಬೆಂಗಳೂರು: ಕೆಎಸ್ಆರ್​​ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಮೂಲಕ ಸಾರಿಗೆ ನೌಕರರ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.

ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ಈ ಯೋಜನೆಯಡಿ ಒಡಬಂಡಿಕೆ ಮಾಡಿಕೊಂಡಿರುವ ಎಲ್ಲ ಆಸ್ಪತ್ರೆಗಳು ಕೆಎಸ್​​ಆರ್​ಟಿಸಿ ನೌಕರರು ಮತ್ತು ಕುಟುಂಬದವರು ಆಸ್ಪತ್ರೆಗೆ ಬಂದಾಗ ಅವರನ್ನು ಗೌರವಯುತವಾಗಿ ಹಾಗೂ ಮಾನವೀಯತೆಯಿಂದ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು.

“ಕೆಎಸ್ಆರ್​ಟಿಸಿ ಆರೋಗ್ಯ” ಯೋಜನೆಯಡಿ ಸಾರಿಗೆ ಸಂಸ್ಥೆಯ ಎಲ್ಲ ನೌಕರರು, ಅವರ ತಂದೆ – ತಾಯಿ ಮತ್ತು ಪತ್ನಿ – ಮಕ್ಕಳಿಗೆ ಖರ್ಚಿನ ಮಿತಿಯಿಲ್ಲದ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಸಿಗಲಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಾದ್ಯಂತ ಇರುವ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಒಟ್ಟು 250 ಖಾಸಗಿ ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಳ್ಳಲಾಗಿದೆ. ಇದೇ ವೇಳೆ, ಕೆಎಸ್​​ಆರ್​ಟಿಸಿ ನೌಕರರು ಅಪಘಾತದಲ್ಲಿ ಮೃತಪಟ್ಟ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ನೀಡಲಾಗುವ 1 ಕೋಟಿ ರೂ ಹಾಗೂ ಸೇವೆಯಲ್ಲಿರುವ ಮೃತಪಟ್ಟ ನೌಕರರ ಕುಟುಂಬಕ್ಕೆ ನೀಡಲಾಗುವ 10 ಲಕ್ಷ ರೂ ಪರಿಹಾರದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ