Breaking News

ಮುಳಬಾಗಲು ಆರ್.ಎಫ್.ಓ ಅಧಿಕಾರಿಯ ಕುರ್ಚಿ ಫೈಟ್

Spread the love

ಕೋಲಾರ, : ಕುರ್ಚಿಗಾಗಿ (Chair) ಸರ್ಕಾರದ ಆದೇಶವನ್ನೇ ಅಧಿಕಾರಿಗಳು ಗಾಳಿಗೆ ತೂರಿರುವಂತಹ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಅಧಿಕಾರ ಹಸ್ತಾಂತರ ಮಾಡಲು ಇಚ್ಚಿಸಿದೆ ಕಚೇರಿಗೆ ಬೀಗ ಹಾಕಿಕೊಂಡು ಹೋಗಿದ್ದ ಅಧಿಕಾರಿಯ ಕಾರ್ಯವೈಖರಿ ಕುರಿತು ದಿಶಾ ಸಭೆಯಲ್ಲಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕುರ್ಚಿಗಾಗಿ ಇಬ್ಬರ ಅಧಿಕಾರಿಗಳ ನಡುವೆ ನಡೆಯುತ್ತಿರುವ ಹೈಡ್ರಾಮಾ ಜಿಲ್ಲೆಯ ಜನರಿಗೆ ಪುಕ್ಕಟೆ ಮನರಂಜನೆ‌ ನೀಡುತ್ತಿದೆ.

ಕುರ್ಚಿಗಾಗಿ ಸರ್ಕಾರದ ಆದೇಶವನ್ನೇ ಗಾಳಿಗೆ ತೂರಿದ ಅಧಿಕಾರಿ: ಸೂಕ್ತ ಕ್ರಮಕ್ಕೆ ಒತ್ತಾಯ

ಮುಳಬಾಗಲು ಆರ್.ಎಫ್.ಓ ಅಧಿಕಾರಿಯ ಕುರ್ಚಿ ಫೈಟ್

ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಸದ ಮಲ್ಲೇಶ್ ಬಾಬು ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ದಿಶಾ ಸಭೆಯಲ್ಲಿ ಮುಳಬಾಗಲು ಆರ್.ಎಫ್.ಓ ಅಧಿಕಾರಿಯ ಕುರ್ಚಿ ಫೈಟ್ ಸಾಕಷ್ಟು ಸದ್ದು ಮಾಡಿತು. ಮುಳಬಾಗಲು ವಲಯ ಅರಣ್ಯಾಧಿಕಾರಿ ಜ್ಯೋತಿ ಅವರನ್ನು ಚನ್ನಪಟ್ಟಣಕ್ಕೆ ವರ್ಗಾವಣೆ ಮಾಡಿ ಮೂರು ತಿಂಗಳು ಕಳೆದರೂ ಸಹ‌‌ ಇಲ್ಲಿಂದ ರಿಲೀವ್‌ ಆಗದೆ ಮೊಂಡುತನ ಪ್ರದರ್ಶನ ಮಾಡುತ್ತಿದ್ದಾರೆ. ಅವರ ಸ್ಥಾನಕ್ಕೆ ಶಾಲಿನಿ‌ ಎಂಬ ಅಧಿಕಾರಿ ಬಂದರೂ ಸಹ ಅವರಿಗೆ ಅಧಿಕಾರವನ್ನು ನೀಡದೆ ಕಚೇರಿಗೆ ಬೀಗ‌ ಹಾಕಿಕೊಂಡು ಹೋಗಿದ್ದಾರೆಂದು ಮುಳಬಾಗಲು ಶಾಸಕ ಸಮೃದ್ದಿ ಮಂಜುನಾಥ್ ಆಕ್ರೋಶ ವಕ್ತಪಡಿಸಿದ್ದಾರೆ.

ಸರ್ಕಾರದ ಆದೇಶಕ್ಕೂ ಕಿಮ್ಮತ್ತು ಇಲ್ಲದಂತಾಗಿದೆ. ಸರ್ಕಾರಿ ಕಚೇರಿಯನ್ನು ತಮ್ಮ ಸ್ವಂತವೆಂದು ತಿಳಿದುಕೊಂಡಿದ್ದು, ಕಚೇರಿಗೆ ಬೀಗ ಹಾಕಿಕೊಂಡು ಹೋಗಿರುವುದಲ್ಲದೆ, ತಮ್ಮ ಮೊಬೈಲ್‌ನ್ನು ಸ್ವಿಚ್ ಆಫ್ ಮಾಡಿಕೊಂಡು ಹೋಗಿದ್ದು, ಜಿಲ್ಲಾಧಿಕಾರಿಗಳು ಕೂಡಲೇ ಇವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ