Breaking News

ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್: ಪ್ರಕರಣ ರದ್ದು ಕೋರಿ ಅರ್ಜಿ, ಕೋರ್ಟ್ ಹೇಳಿದ್ದೇನು?

Spread the love

ಬೆಂಗಳೂರು, ಜನವರಿ 06: ನಗರದ ಮಾರತಹಳ್ಳಿಯಲ್ಲಿ ನೇಣಿಗೆ ಶರಣಾಗಿದ್ದ ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು.

ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಟೆಕ್ಕಿ ವಿಚಾರ ಸುಪ್ರೀಂಕೋರ್ಟ್, ರಾಷ್ಟ್ರಪತಿಗಳ ಅಂಗಳ ತಲುಪುವ ಮೂಲಕ ಸಂಚಲನ ಸೃಷ್ಟಿಸಿತ್ತು.

ಇದೀಗ ಈ ಪ್ರಕರಣವನ್ನು ರದ್ದುಕೋರಿ ನಿಖಿತಾ,‌ ನಿಶಾ, ಅನುರಾಗ್, ಸುಶೀಲ್​ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅತುಲ್ ಸುಭಾಪ್​ ಪತ್ನಿ ಹಾಗೂ ಕುಟುಂಬದವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ನ್ಯಾ.ಎಸ್.ಆರ್.ಕೃಷ್ಣಕುಮಾರ್, ಎಫ್ಐಆರ್​ನಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಅಂಶಗಳಿವೆ

ಎಂದು ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ. ತನಿಖೆಯ ಸಂದರ್ಭದಲ್ಲಿ ಕಲೆಹಾಕಿದ ದಾಖಲೆಗಳನ್ನು 2 ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಅಭಿಯೋಜಕರಿಗೆ ಹೈಕೋರ್ಟ್ ಸೂಚಿಸಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ