Breaking News

ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Spread the love

ಬೆಂಗಳೂರು : ನಿಗದಿತ ವೇತನ, ಸರ್ಕಾರದಿಂದ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ‌. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ರಾಜ್ಯದಲ್ಲಿರುವ 42,000 ಜನ ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹಲವು ವರ್ಷಗಳಿಂದ ಈಡೇರಿಲ್ಲ. ಆದ್ದರಿಂದ ಕೆಲಸ ಸ್ಥಗಿತಗೊಳಿಸಿ ಧರಣಿಗೆ ನಿರ್ಧರಿಸಿದ್ದೇವೆ ಎಂದು ಪ್ರತಿಭಟನಾ ನಿರತರು ತಿಳಿಸಿದರು.

ಬೇಡಿಕೆಗಳೇನು? ಆಶಾ ಕಾರ್ಯಕರ್ತೆಯರಿಗೆ 15 ಸಾವಿರ ರೂ. ಗೌರವಧನ ನೀಡಬೇಕು. ನಗರ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ ಕೆಲಸ ಹಾಗೂ ನಗರದ ದುಬಾರಿ ಜೀವನ ವೆಚ್ಚಗಳಿಗೆ ಅನುಗುಣವಾಗಿ 20 ಸಾವಿರ ರೂ. ಗೌರವಧನ ಹೆಚ್ಚಿಸಬೇಕು.

asha-workers-conduct-protest

8 ವರ್ಷಗಳಿಂದಲೂ ಆಶಾ ಕಾರ್ಯಕರ್ತೆಯರು ಮಾಡುತ್ತಿರುವ ಕೆಲಸಗಳು ಆಶಾ ನಿಧಿ ಪೋರ್ಟಲ್‌ನಲ್ಲಿ ದಾಖಲಾಗುತ್ತಿಲ್ಲ. ರಾಜ್ಯಾದ್ಯಂತ ಬಾಕಿ ಇರುವ 3 ತಿಂಗಳ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು ಹಾಗೂ ಆಶಾ ಕಾರ್ಯಕರ್ತೆಯರಿಗೆ ವಹಿಸಿರುವ ಮೊಬೈಲ್ ಆಧಾರಿತ ಕೆಲಸಗಳನ್ನ ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳಬಾರದು. ಇಲ್ಲದಿದ್ದರೆ ಮೊಬೈಲ್‌ ಆಧಾರಿತ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ಪಶ್ಚಿಮ ಬಂಗಾಳ ರಾಜ್ಯದ ಮಾದರಿಯಲ್ಲಿ ಸೇವಾ ನಿವೃತ್ತಿ ಪಡೆಯುವ ಆಶಾ ಕಾರ್ಯಕರ್ತೆಯರಿಗೆ ರೂ.5 ಲಕ್ಷ ನೀಡಬೇಕು. ಪ್ರತಿವರ್ಷ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಸೌಲಭ್ಯ ಕಲ್ಪಿಸಬೇಕು. ಆಶಾ ಕಾರ್ಯಕರ್ತೆಯರನ್ನ ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಭವಿಷ್ಯನಿಧಿ, ಕಾರ್ಮಿಕರ ರಾಜ್ಯ ವಿಮೆ ಸೌಲಭ್ಯ ಒದಗಿಸಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

*ಜನರ ಸೇವೆಗೆ ಬಸ್ ಖರೀದಿ ಮಾಡಿದಾಗ ಬಸ್ ಟಿಕೇಟ್ ದರ ಏರಿಕೆ ಮಾಡುವುದು ಅನಿವಾರ್ಯ ಎಂದ ಅಧ್ಯಕ್ಷರು ರಾಜು ಕಾಗೆ*

Spread the love ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಇಲಾಕೆ ಸಚಿವರು ಎಲ್ಲ ಸಾಧಕ ಬಾದಕ ಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ