Breaking News

ಸಂಭಾಜಿ ಮಹಾರಾಜರ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮ ಅನಧಿಕೃತ:D.C.

Spread the love

ಬೆಳಗಾವಿ: ಬೆಳಗಾವಿಯ ಅನಗೋಳದ ಧರ್ಮವೀರ ಸಂಭಾಜಿ ವೃತ್ತದಲ್ಲಿ ನಿರ್ಮಿಸಿರುವ ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಭಾನುವಾರ ಅನಧಿಕೃತವಾಗಿ ಅನಾವರಣವಾಗಿದೆ. ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಒಂದು ಕಾರ್ಯಕ್ರಮ ಮಾಡಿ ಪ್ರತಿಮೆಯನ್ನು ಉದ್ಘಾಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಮಾಹಿತಿ ನೀಡಿದರು.

ಜಿಲ್ಲಾಡಳಿತದ ವಿರೋಧದ ನಡುವೆಯೂ ನಿನ್ನೆ ಶಾಸಕ ಅಭಯ್ ಪಾಟೀಲ ನೇತೃತ್ವದಲ್ಲಿ ಅದ್ಧೂರಿಯಾಗಿ ಶೋಭಾಯಾತ್ರೆ ನಡೆಸುವ ಮೂಲಕ ಸಂಭಾಜಿ ಮಹಾರಾಜರ ಮೂರ್ತಿಯನ್ನು ಅನಾರವಣಗೊಳಿಸಲಾಗಿತ್ತು. ಈ ವೇಳೆ ಶಿವಾಜಿ ಮಹಾರಾಜರ 13ನೇ ವಂಶಸ್ಥರೂ ಆಗಿರುವ ಮಹಾರಾಷ್ಟ್ರ ಸರ್ಕಾರದ ಲೋಕೋಪಯೋಗಿ ಇಲಾಖೆ ಸಚಿವ ಶಿವೇಂದ್ರರಾಜೆ ಭೋಸ್ಲೆ ಕೂಡ ಉಪಸ್ಥಿತರಿದ್ದರು.

 

ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್, ಸಂಭಾಜಿ ಮಹಾರಾಜರ ಪ್ರತಿಮೆ

ಈ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿಗಳು, ನಿನ್ನೆ ಆಗಿರುವ ಕಾರ್ಯಕ್ರಮ ಅನಧಿಕೃತವಾಗಿದೆ. ಎರಡು ವರ್ಷಗಳ ಹಿಂದೆ ಒಂದು ಠರಾವು ಪಾಸ್ ಮಾಡಿ ಪುತ್ಥಳಿ ಅನಾವರಣ ಮಾಡಬೇಕೆಂದು ಕೇಳಿದ್ದರು. ಸರ್ಕಾರಕ್ಕೂ ಕೂಡಾ ಒಂದು ವರದಿ ಹೋಗಿದೆ. ಸುಪ್ರೀಂ ಕೋರ್ಟ್ ಪ್ರಕಾರ ಜಿಲ್ಲಾಧಿಕಾರಿ ಅವರಿಂದ ಒಂದು ವರದಿ ಇರಬೇಕು ಅಂತಾ ಇದೆ. ಸರ್ಕಲ್​ನಿಂದ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಆಗಬಾರದು ಎಂದು ಸರ್ಕಾರದಿಂದ ತಿರಸ್ಕಾರ ಆಗಿ ಒಂದು ಪತ್ರ ಬಂದಿದೆ ಎಂದರು.

ಮೊನ್ನೆ ನಾನು ಸಭೆ ನಡೆಸಿದ ಬಳಿಕ ಸಮಯ ಕೇಳಿದ್ದೆ. ಆದರೆ, ನಿನ್ನೆ ಅನಧಿಕೃತವಾಗಿ ಕಾರ್ಯಕ್ರಮ ನಡೆಸಿದ್ದಾರೆ. ಎಲ್ಲಾ ಪಕ್ಷದವರು, ಎಲ್ಲಾ ಧರ್ಮದವರು ಸಂಭಾಜಿ ಮಹಾರಾಜರ ಪುತ್ಥಳಿ ಅನಾವರಣ ಕಾರ್ಯಕ್ರಮ ಅದ್ಧೂರಿ ಆಚರಣೆಗೆ ಉತ್ಸುಕರಾಗಿದ್ದರು. ಕೆಲಸ ಅಪೂರ್ಣ ಆಗಿದೆ. ಪುತ್ಥಳಿ ಉದ್ಘಾಟನೆ ಮಾಡುವುದು ಬೇಡ ಎಂದು ಹೇಳಿದ್ದರು. ಹಾಗಾಗಿ, ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಒಂದು ಕಾರ್ಯಕ್ರಮ ಮಾಡಲಾಗುತ್ತದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಶಿವಮೊಗ್ಗ ಜಿಲ್ಲೆಯಲ್ಲಿ 2023ಕ್ಕಿಂತ 2024ರಲ್ಲಿ ಮದ್ಯ ಮಾರಾಟ ಕಡಿಮೆಯಾಗಿದೆ.

Spread the loveಶಿವಮೊಗ್ಗ: ಜಿಲ್ಲೆಯಲ್ಲಿ ಮದ್ಯ ಮಾರಾಟ 2023ಕ್ಕೆ ಹೋಲಿಸಿದರೆ 2024ರಲ್ಲಿ ಕಡಿಮೆಯಾಗಿರುವುದನ್ನು ಜಿಲ್ಲಾ ಅಬಕಾರಿ ಇಲಾಖೆಯ ಅಂಕಿಅಂಶಗಳು ತಿಳಿಸುತ್ತವೆ. 2023ರಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ