Breaking News

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿ ಪರಿಶೀಲನೆ ಸಭೆ

Spread the love

ಬೆಂಗಳೂರು: ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಿ. ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಲಕ್ಷ ಆಸ್ತಿಗಳ ಡಿಜಿಟೈಸ್‌ ಮಾಡಲಾಗಿದೆ. ಈಗಾಗಲೇ 15 ಲಕ್ಷ ಖಾತೆಗಳನ್ನು ಡೌನ್‌ಲೋಡ್‌ ಮಾಡಲಾಗಿದೆ. ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಕ್ರಮಬದ್ಧವಲ್ಲದ ಸ್ವತ್ತುಗಳ ನಕಲಿ ಖಾತೆಗಳನ್ನು ಸೃಜಿಸಿ ವಂಚನೆಯಿಂದ ಹೆಚ್ಚು ದಸ್ತಾವೇಜುಗಳ ನೋಂದಣಿ ಮಾಡುವ ಪ್ರಕ್ರಿಯೆಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಸೂಚಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿ ಪರಿಶೀಲನೆ ಸಭೆ

ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ, ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇದಕ್ಕೆ ಪರಸ್ಪರ ಹೊಂದಾಣಿಕೆಯಿಂದ ಮೂರೂ ಇಲಾಖೆಗಳು ಕಾರ್ಯನಿರ್ವಹಿಸಿ. ನಿಯಮ ಪಾಲಿಸದ ರೆವಿನ್ಯೂ ಬಡಾವಣೆಗಳಿಗೆ ಬ್ರೇಕ್ ಹಾಕುವ ಅತ್ಯಗತ್ಯವಿದೆ. ಒಂದೇ ಸೈಟನ್ನು ಹಲವರಿಗೆ ಮಾರುವ ವಂಚನೆಗೆ ಸಂಪೂರ್ಣ ಬ್ರೇಕ್ ಹಾಕಲೇಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.

ನಕಲಿ ದಾಖಲೆಗಳ ಪರಿಶೀಲಿಸದೆ ಆಸ್ತಿ ನೋಂದಣಿ ಮಾಡಲಾಗುತ್ತಿದೆ. ಕೆಲವು ಅಧಿಕಾರಿಗಳೂ ಇದರ ಪರವಾಗಿದ್ದಾರೆ. ಇದೆಲ್ಲಕ್ಕೂ ಕಡಿವಾಣ ಅಗತ್ಯ. ಬಿಬಿಎಂಪಿಯಲ್ಲಿ ಸುಮಾರು 15 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಇದರಿಂದ ತೆರಿಗೆಯೂ ಕಟ್ಟದ ಕಾರಣ ಸಾವಿರಾರು ಕೋಟಿ ರೂ. ತೆರಿಗೆ ಪ್ರತಿ ವರ್ಷ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಅಂದಾಜು 30 ಲಕ್ಷ ಆಸ್ತಿಗಳಿಗೆ ಖಾತೆಗಳು ಇರುವುದಿಲ್ಲ‌ ಎಂದರು.

ಗ್ರಾಮ ಪಂಚಾಯತ್‌ಗಳಲ್ಲಿ ಅಂದಾಜು 90 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಖಾತೆಯಿಲ್ಲದೆ, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಇದಕ್ಕೆ ಸ್ಥಳೀಯ ಸಂಸ್ಥೆಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸ್ಥಳೀಯ ಸಂಸ್ಥೆಗಳು ಖಾತಾ ನೀಡಿರುವ ಆಸ್ತಿಗಳನ್ನು ಮಾತ್ರ ನೋಂದಣಿ ಇಲಾಖೆಯಡಿ ನೋಂದಣಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೀಡಿರುವ ಖಾತಾ ದಾಖಲೆಗಳ ಡಾಟಾಬೇಸ್‌ ಕಂಪ್ಯೂಟರ್‌ನಲ್ಲಿ ಇರಬೇಕು. ಈ ಡಾಟಾ ಬೇಸ್‌ ಆಧರಿಸಿ ನೋಂದಣಿ ಪ್ರಕ್ರಿಯೆ ಮಾಡಬೇಕು ಎಂದು ಸೂಚಿಸಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ