Breaking News

ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ನಿಷೇಧ………..

Spread the love

ಬೆಳಗಾವಿ : ಕೊರೊನಾ ಎರಡನೇ ಅಲೆ ಅಪ್ಪಳಿಸುವ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಆಚರಿಸುವುದನ್ನು ನಿಷೇಧಿಸಲು ಸರ್ಕಾರ ನಿರ್ಧರಿಸಿದೆ ಎಂದು  ಕಂದಾಯ ಸಚಿವ ಆರ್.ಅಶೋಕ ತಿಳಿಸಿದ್ದಾರೆ.

ಇಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊಸ ವರ್ಷಾಚರಣೆಯನ್ನು ನಿಷೇಧ ಮಾಡಲು ಈಗಾಗಲೇ  ಸಿಎಂ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಾನು ಈ ಕುರಿತು ಚರ್ಚೆ ಮಾಡಿದ್ದೇವೆ. ಇದಕ್ಕೆ ಸಿಎಂ ಕೂಡಾ ಸಮ್ಮತಿ ನೀಡಿದ್ದಾರೆ. ಆದ ಕಾರಣ ಶೀಘ್ರದಲ್ಲಿ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಇನ್ನೊಂದು ಬಾರಿ  ಚರ್ಚಿಸಿ , ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ. ಬಾರ್,  ಹೊಟೇಲ್ ಓಪನ್ ಇರುತ್ತದೆ, ಕೋವಿಡ್ ನಿಯಮಾವಳಿಯಂತೆ ಪಾರ್ಟಿ ಮಾಡಬಹುದು. ಆದ್ರೆ ಸಾರ್ವಜನಿಕವಾಗಿ ಆಚರಣೆಗೆ ಅವಕಾಶ ಇರೋದಿಲ್ಲ ಎಂದು ಹೇಳಿದರು.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಸರ್ಕಾರ ಕೆಡವಿದ್ದು ಸಿದ್ದರಾಮಯ್ಯ ಎಂಬುವುದು ಇದೀಗ ಸ್ಪಷ್ಟವಾಗಿದೆ. ಕುಮಾರಸ್ವಾಮಿ ಅವರಿಗೆ ಈಗಾಲಾದ್ರು ಸತ್ಯ ಗೊತ್ತಾಗಿದೆ. ಮೈಸೂರಿನಲ್ಲಿ ಜ್ಞಾನೋದಯ ಆಗಿದ್ದು ಒಳ್ಳೆಯದು ಎಂದು ವ್ಯಂಗ್ಯ ವಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ