Breaking News

ಜನವರಿ 21ಕ್ಕೆ ಬೆಳಗಾವಿಯಲ್ಲಿ AICCಯಿಂದ ಸಮಾವೇಶ

Spread the love

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದ ಹಿನ್ನೆಲೆಯಲ್ಲಿ ರದ್ದಾಗಿದ್ದ, ಬೆಳಗಾವಿ ಎಐಸಿಸಿ ಅಧಿವೇಶನ ಹಿನ್ನೆಲೆಯಲ್ಲಿ ನಡೆಯಬೇಕಿದ್ದ ಸಮಾವೇಶ ಜನವರಿ21ರಂದು ನಡೆಯಲಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ ಸಿಸಿ ಅದ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಈ ವಿಷಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ ಸಿಸಿ ಅದ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಈ ವಿಷಯ ತಿಳಿಸಿದ್ದಾರೆ.ಡಿಸೆಂಬರ್ .26, 27ರಂದು ಬೆಳಗಾವಿಯಲ್ಲಿ ೨ ದಿನಗಳ ಕಾಲ ಎಐಸಿಸಿ ಅಧಿವೇಶನ ಕಾರ್ಯಕ್ರಮ ನಿಗದಿಯಾಗಿತ್ತು.

ಆದರೆ 26ರಾತ್ರಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನಲೆಯಲ್ಲಿ 27ರ ಎಲ್ಲಾ ಕಾರ್ಯಕ್ರಮಗಳು ರದ್ದಾಗಿತ್ತು. ಇದೀಗ 27ರಂದು ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಜ.21ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಅಂದು ಬೆಳಿಗ್ಗೆ ಸುವರ್ಣ ವಿಧಾನಸೌಧದ ಎದುರು ಮಹಾತ್ಮಾಗಾಂಧಿ ಪುತ್ಥಳಿ ಅನಾವರಣಗೊಳ್ಳಲಿದೆ. ನಂತರ ಸಾರ್ವಜನಿಕ ಸಮಾವೇಶ ನಗರದ ಸಿಪಿಎಡ್ ಮೈದಾನದಲ್ಲಿ ನಡೆಯಲಿದೆ. ಸಾರ್ವಜನಿಕ ಸಮಾವೇಶಕ್ಕೆ ರಜ್ಯದ ಎಲ್ಲೆಡೆಯಿಂದ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 100 ಜನಮುಖಂDaರು, ಕಾರ್ಯಕರ್ತರು ಆಗಮಿಸಬೇಕು. ಈ ಬಗ್ಗೆ ಜ.15, 16 ರಂದು ಎಲ್ಲಾ ಮುಖಂಡರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪೂರ್ವಬಾವಿ ಸಭೆ ನಡೆಸಬೇಕು. ಈ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಪ್ರಯತ್ನಿಸಬೇಕು ಎಂದು ಕರೆ ನೀಡಿದರು.


Spread the love

About Laxminews 24x7

Check Also

ಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ ಹೆಚ್ಚು.

Spread the loveಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ