Breaking News

ಲಾಕ್‍ಡೌನ್ ಮಾರ್ಗಸೂಚಿ ಮಾರ್ಪಾಡು- ಮದ್ಯ ಮಾರಾಟಕ್ಕಿಲ್ಲ ಅವಕಾಶ

Spread the love

ಬೆಂಗಳೂರು: ಲಾಕ್‍ಡೌನ್ ಮಾರ್ಗಸೂಚಿಯನ್ನು ಸರ್ಕಾರ ಮಾರ್ಪಾಡು ಮಾಡಿದ್ದು, ಮದ್ಯ ಮಾರಾಟಕ್ಕೆ ನೀಡಿದ ಅನುಮತಿಯನ್ನು ಹಿಂಪಡೆದಿದೆ.

ಮಂಗಳವಾರ ರಾತ್ರಿ 8 ಗಂಟೆಯಿಂದ ಬೆಂಗಳೂರು ಲಾಕ್ ಆಗಲಿದೆ. ಈ ಸಂಬಂಧ ಸರ್ಕಾರ ಪ್ರಕಟಿಸಿದ ಮೊದಲ ಮಾರ್ಗಸೂಚಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿತ್ತು. ಬೆಳಗ್ಗೆ 10 ರಿಂದ ಸಂಜೆ 5ರವೆರೆಗೆ ಮದ್ಯದ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಿತ್ತು. ಕೇವಲ ಪಾರ್ಸೆಲ್ ನೀಡಬೇಕೆಂದು ಮಾರ್ಗಸೂಚಿಯಲ್ಲಿ ಹೇಳಿತ್ತು.ಸರ್ಕಾರದ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಲೇ ಎಚ್ಚೆತ್ತ ಸರ್ಕಾರ ಮಾರ್ಗಸೂಚಿಯಲ್ಲಿ ಬದಲಾವಣೆ ತಂದಿದೆ. ಮಂಗಳವಾರ ರಾತ್ರಿ 8 ಗಂಟೆಯಿಂದ ರಾಜಧಾನಿಯಲ್ಲಿ ಮದ್ಯದ ಮಳಿಗೆಗಳು ಮುಚ್ಚಲಿವೆ. ಮೊದಲಿನ ಮಾರ್ಗಸೂಚಿ ನೋಡಿದ್ದ ಖುಷಿಯಾಗಿದ್ದ ಗುಂಡೈಕ್ಳಿಗೆ ಸರ್ಕಾರ ಶಾಕ್ ನೀಡಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ