Breaking News
Home / ಜಿಲ್ಲೆ / ಬೆಂಗಳೂರು / ಡಿ. 7ರಿಂದ 15ರವರೆಗೆ ವಿಧಾನಸೌಧದ ಸುತ್ತ ನಿಷೇಧಾಜ್ಞೆ

ಡಿ. 7ರಿಂದ 15ರವರೆಗೆ ವಿಧಾನಸೌಧದ ಸುತ್ತ ನಿಷೇಧಾಜ್ಞೆ

Spread the love

ಬೆಂಗಳೂರು, ಡಿ.6- ವಿಧಾನಸೌಧದಲ್ಲಿ ನಡೆಯುವ ಅಧಿವೇಶನದ ಸಂಬಂಧ ಡಿ. 7ರಿಂದ 15ರವರೆಗೆ ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಬೆಂಗಳೂರು ನಗರದ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಬಂಧನೆಗಳಿಗೆ ಒಳಪಡುವಂತೆ ನಿಷೇದಾಜ್ಞೆಯನ್ನು ವಿಧಿಸಲಾಗಿದೆ.

ವಿಧಾನಸೌಧದಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನಗಳು ನಡೆಯಲಿದ್ದು, ಈ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ ಇತ್ಯಾದಿ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇರುತ್ತವೆ.

ಇದರಿಂದ ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆ ಉಂಟಾಗುವುದಲ್ಲದೆ ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯುಂಟಾಗುವ ಸಾಧ್ಯತೆಗಳು ಇರುವುದಾಗಿ ಗುಪ್ತವಾರ್ತಾ ಮಾಹಿತಿಯಿಂದ ತಿಳಿದುಬಂದಿರುತ್ತದೆ. ಈ ನಿಟ್ಟಿನಲ್ಲಿ ಅಧಿವೇಶನದ ಕಲಾಪಗಳು ಸುಗಮವಾಗಿ ನಡೆಯುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಪ್ರತಿಬಂಧಕಾಜ್ಞೆ ಹೊರಡಿಸಿರುವುದಾಗಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರಬಾರದು. ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವಂತಿಲ್ಲ. ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಕಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು, ಯಾವುದೇ ಸ್ಪೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಮತ್ತು ಶೇಖರಿಸುವುದನ್ನು ನಿಷೇದಿಸಲಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ