Breaking News

ಕಾರಾಗೃಹದಲ್ಲಿ ಎಸೆನ್ಸ್ ಸೇವಿಸಿ ಮೂವರು ಕೈದಿಗಳು ಸಾವು ಪ್ರಕರಣದ ಹಿನ್ನೆಲೆಯಲ್ಲಿ ಕಾರಾಗೃಹ ಹಾಗೂ ಸುಧಾರಣಾ ಸೇವಾ ಇಲಾಖೆಯು ಖಡಕ್​ ಸೂಚನೆ

Spread the love

ಬೆಂಗಳೂರು: ಮೈಸೂರು ಕೇಂದ್ರ ಕಾರಾಗೃಹದಲ್ಲಿ ಕೇಕ್​ ತಯಾರಿಕೆಗೆ ಬಳಸಲಾಗುವ ಸುಗಂಧದ್ರವ್ಯ (ಎಸೆನ್ಸ್​) ಸೇವಿಸಿ ಮೂವರು ಸಜಾ ಕೈದಿಗಳು ಸಾವನ್ನಪ್ಪಿರುವ ಪ್ರಕರಣವನ್ನು ಕಾರಾಗೃಹ ಹಾಗೂ ಸುಧಾರಣಾ ಸೇವಾ ಇಲಾಖೆಯು ಗಂಭೀರವಾಗಿ ಪರಿಗಣಿಸಿದ್ದು, ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಿರಲು ರಾಜ್ಯದ ಎಲ್ಲಾ ಜೈಲುಗಳಿಗೆ ನಿರ್ದೇಶನ ನೀಡಿದೆ.

ಬೆಂಗಳೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ ಸೇರಿದಂತೆ ಇತರ ರಾಜ್ಯ ಹಾಗೂ ಜಿಲ್ಲಾ ಕಾರಾಗೃಹಗಳ ಅಧೀಕ್ಷಕರಿಗೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ನಿರ್ದೇಶನ ನೀಡಿದ್ದಾರೆ.

ನಿಗಾ ವಹಿಸುವಂತೆ ಸೂಚನೆ: ಕಾರಾಗೃಹದಲ್ಲಿನ ಬೇಕರಿ ವಿಭಾಗದಲ್ಲಿ ಕೇಕ್ ತಯಾರಿಸಲು ಎಸೆನ್ಸ್ ಬಳಕೆ ಮಾಡಲಾಗುತ್ತಿದೆ. ಕೇಕ್ ತಯಾರಿಸುವ ಕೈದಿಗಳ ಬಗ್ಗೆ ಎಚ್ಚರ ವಹಿಸಬೇಕು. ನಿಗದಿತ ಕೈದಿಗಳನ್ನ ಹೊರತುಪಡಿಸಿದರೆ ವಿವಿಧ ಜವಾಬ್ದಾರಿ ವಹಿಸಿಕೊಂಡಿರುವ ಹಾಗೂ ವಿವಿಧ ಬ್ಯಾರಕ್​ನಲ್ಲಿನ ಕೈದಿಗಳಿಗೆ ಪ್ರವೇಶ ನಿರ್ಬಂಧ ಕಠಿಣಗೊಳಿಸಬೇಕು. ಬೇಕರಿ ಉತ್ಪನ್ನದಲ್ಲಿ ತೊಡಗಿರುವ ಕೈದಿಗಳು ಕೆಲಸ ಸಮಯದಲ್ಲಿ ಮಾತ್ರ ಇರಬೇಕು. ಕೆಲಸ ಅವಧಿ ಮುಗಿದ ಬಳಿಕ ವಿಭಾಗಕ್ಕೆ ಯಾರು ಹೋಗದಿರಲು ನಿಗಾ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ