Breaking News
Home / ರಾಜ್ಯ / ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ : ಇಬ್ಬರು ವಶಕ್ಕೆ

ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ : ಇಬ್ಬರು ವಶಕ್ಕೆ

Spread the love

ಬೆಂಗಳೂರು, ಡಿ.- ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕೋಲಾರ ಜಿಲ್ಲಾ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ವಶದಲ್ಲಿರುವ ಇಬ್ಬರ ಪೈಕಿ ಒಬ್ಬಾತ ಬೆಂಗಳೂರಿನವನು ಎಂಬುದು ಗೊತ್ತಾಗಿದೆ.

ವರ್ತೂರು ಪ್ರಕಾಶ್ ಅಪಹರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 18 ಮಂದಿಯನ್ನು ವಿಚಾರಣೆಗೊಳಪಡಿಸಿ ಪೊಲೀಸರು ಕೆಲವು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಫಾರಂಹೌಸ್ ಬಳಿ ವರ್ತೂರು ಪ್ರಕಾಶ್ ಅವರನ್ನು ಹಣ ಕ್ಕಾಗಿ ಅಪಹರಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪಹರಣಕಾರರ ಸುಳಿವಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಪಹರಣಕಾರರ ಪತ್ತೆಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಒಂದು ತಂಡ ಪುಣೆಗೆ ಮತ್ತೊಂದು ತಂಡ ಆಂಧ್ರಪ್ರದೇಶಕ್ಕೆ ತೆರಳಿ ಆರೋಪಿಗಳ ಬಗ್ಗೆ ಮಾಹಿತಿ ತಲೆ ಹಾಕುತ್ತಿದೆ.

ಅಪಹರಣದ ಹಿಂದೆ ಸ್ಥಳೀಯರ ಕೈವಾಡವಿರುವುದು ಕಂಡು ಬಂದಿದೆ. ಕೂಡಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಉತ್ತರ ಪತ್ರಿಕೆಗಳಲ್ಲಿ ‘ಜೈ ಶ್ರೀ ರಾಮ್’ ಎಂದು ಬರೆದಿದ್ದ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ ಇಬ್ಬರು ಶಿಕ್ಷಕರ ಅಮಾನತು

Spread the love ನವದೆಹಲಿ: ಪರೀಕ್ಷಾರ್ಥಿಗಳಿಗೆ ಅವರ ಉತ್ತರಗಳ ಗುಣಮಟ್ಟದ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ. ಆದಾಗ್ಯೂ, ಉತ್ತರ ಪ್ರದೇಶದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ