Breaking News

ಯೋಧ ರವಿ ತಳವಾರ ಅಂತಿಮ ಯಾತ್ರೆ

Spread the love

ಬೆಳಗಾವಿ: ನಾಗಾಲ್ಯಾಂಡ್​​ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಜಿಲ್ಲೆಯ ಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಸಾವಿರಾರು ಜನರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಬೆಳಗಾವಿ ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದ ಯೋಧ ರವಿ ತಳವಾರ (35) ಅವರ ಪಾರ್ಥಿವ ಶರೀರ ಶನಿವಾರ ಸ್ವಗ್ರಾಮಕ್ಕೆ ಆಗಮಿಸಿತು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಅಂತ್ಯಕ್ರಿಯೆಗೂ ಮುನ್ನ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ದಕ್ಕೂ ಭಾರತ್ ಮಾತಾ ಕೀ ಜೈ, ರವಿ ಅಮರ್ ರಹೇ ಘೋಷಣೆಗಳು ಮೊಳಗಿದವು. ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ರವಿ ತಳವಾರ ಅವರ ಅಂತ್ಯಕ್ರಿಯೆ ನೆರವೇರಿತು.ಎರಡು ದಿನಗಳ ಹಿಂದೆ ರಸ್ತೆ ಮಾರ್ಗವಾಗಿ ಹೊರಟಿದ್ದ ಸೇನಾ ವಾಹನವು ಕಂದಕಕ್ಕೆ ಉರುಳಿ ಬಿದ್ದು ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ರವಿ ಸೇರಿ ಮೂವರು ಯೋಧರು ಮೃತರಾಗಿದ್ದರು. ರವಿ ತಳವಾರ ಅವರು ನಾಗಾಲ್ಯಾಂಡ್ ರೈಫಲ್ಸ್‌ನಲ್ಲಿ ಕಳೆದ 16 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು‌.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ