ಕಾರವಾರ, ಜನವರಿ 11: ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಿಂದ (Chemical Leak) 18 ಕಾರ್ಮಿಕರು ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಬಳಿಯ ಆದಿತ್ಯ ಬಿರ್ಲಾ ಗ್ರೂಪ್‌ನ ಕಾಸ್ಟಿಕ್ ಸೋಡಾ ಉತ್ಪಾದಿಸುವ ಗ್ರಾಸಿಮ್ ಇಂಡಸ್ಟ್ರೀಸ್ನಲ್ಲಿ ನಡೆದಿದೆ.
ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರವಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ನೀಲಕಂಠ, ಜಹನ್ನೂರು, ಕಮಲೇಶ್ ವರ್ಮಾ, ನಂದಕಿಶೋರ್, ದೀಪು, ಸೃಜನ್, ನಜೀದುಲ್ಲಾ, ಬೇಜನ್ ಕುಮಾರ್, ಕಿಶನ್ ಕುಮಾರ್, ಅಜೀಜ್, ಮೋಹಿತ್ ವರ್ಮಾ ಸೇರಿದಂತೆ ಕರ್ನಾಟಕ, ಉತ್ತರಪ್ರದೇಶ ಮತ್ತು ಬಿಹಾರ ಮೂಲದ 18 ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ.
Laxmi News 24×7