Breaking News

ಮಾರ್ಚ್​ನಿಂದ ಜಿಲ್ಲಾ ಪ್ರವಾಸ:ಹೆಚ್. ಡಿ. ದೇವೇಗೌಡ

Spread the love

ಬೆಂಗಳೂರು: ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಆ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್. ಡಿ. ದೇವೇಗೌಡ ತಿಳಿಸಿದರು.

ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಕರೆ ನೀಡಿದರು.

ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಆದರೆ ಅದು ಸಾಧ್ಯವಿಲ್ಲ. ಏಕೆಂದರೆ, ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ. ಹೀಗಾಗಿ ಅವರನ್ನು ಮುಗಿಸುವುದು ಸಾಧ್ಯವಿಲ್ಲದ ಮಾತು ದೇವೇಗೌಡರು ಖಡಕ್​ ಸಂದೇಶ ರವಾನಿಸಿದರು.

ಕಾಂಗ್ರೆಸ್​ ಪಕ್ಷದ ಕಚೇರಿಗಳ ಗೋಡೆಗಳನ್ನೊಮ್ಮೆ ನೋಡಿ : ಜೆಡಿಎಸ್ ಕುಟುಂಬ ಆಧಾರಿತ ಪಕ್ಷ ಎಂದು ಕಾಂಗ್ರೆಸ್ ಹೇಳುತ್ತದೆ. ಯಾರಾದರೂ ಒಮ್ಮೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಹೋಗಿ, ಅಲ್ಲಿ ಗೋಡೆಗಳ ಮೇಲೆ ನೇತು ಹಾಕಿರುವ ಫೋಟೋಗಳನ್ನು ಒಮ್ಮೆ ನೋಡಿ. ಕುಟುಂಬ ಆಧಾರಿತ ಪಾರ್ಟಿ ಯಾವುದು ಎನ್ನುವುದು ಗೊತ್ತಾಗುತ್ತದೆ ಎಂದು ಮಾಜಿ ಪ್ರಧಾನಿ ಗುಡುಗಿದರು.

ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ, ಪಕ್ಷ ಸಂಘಟನೆಯಲ್ಲಿ ಹಿಂದೆ ಬೀಳುವುದು ಬೇಡ. ಎಲ್ಲರೂ ಒಟ್ಟಾಗಿ ಪಕ್ಷ ವಹಿಸುವ ಕೆಲಸ ಮಾಡೋಣ ಎಂದು ತಿಳಿಸಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ