Breaking News

ಪಿಸ್ತಾ ಸಿಪ್ಪೆ ನುಂಗಿ 2 ವರ್ಷದ ಬಾಲಕ ದುರಂತ ಸಾವು

Spread the love

ಕಾಸರಗೋಡು, (ಜನವರಿ 13): ಪಿಸ್ತಾ ಸಿಪ್ಪೆ ನುಂಗಿ 2 ವರ್ಷದ ಬಾಲಕ ದುರಂತ ಸಾವು ಕಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಗ್ರಾಮದಲ್ಲಿ ನಡೆದಿದೆ. ಅನಸ್ ಮೃತ ಬಾಲಕ. ಶನಿವಾರ ಪಿಸ್ತಾ ಸಿಪ್ಪೆ ನುಂಗಿದ್ದ. ತಕ್ಷಣ ಪೋಷಕರು, ಸಿಪ್ಪೆಯ ಒಂದು ಭಾಗ ಹೊರ ತೆಗೆದಿದ್ದರು. ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ತಪಾಸಣೆ ಮಾಡಿ ಮಗುವಿನ ಗಂಟಲಿನಲ್ಲಿ ಏನು ಸಿಕ್ಕಿ ಹಾಕಿಕೊಂಡಿಲ್ಲ ಎಂದಿದ್ದಾರೆ. ಆದ್ರೆ, ಭಾನುವಾರ ಶ್ವಾಸಕೋಶದಲ್ಲಿ ಸಿಪ್ಪೆ ಸಿಲುಕಿಕೊಂಡು ಉಸಿರಾಟದ ತೊಂದರೆಯಾಗಿ ಮಗು ಮೃತಪಟ್ಟಿದೆ.ಕಾಸರಗೋಡು ಜಿಲ್ಲೆಯ ಕುಂಬಳೆಯ ಭಾಸ್ಕರ್ ನಗರ ನಿವಾಸಿ ಅನ್ವರ್ ಹಾಗೂ ಮೆಹರೂಫ ಎಂಬುವರ ಮಗ ಅನಸ್ ಶನಿವಾರ ಪಿಸ್ತಾದ ಸಿಪ್ಪೆ ನುಂಗಿದ್ದ. ಕೂಡಲೇ ಸಿಪ್ಪೆಯ ಒಂದು ಭಾಗ ಹೊರ ತೆಗೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಮಗುವಿನ ತಪಾಸಣೆ ಮಾಡಿದ ವೈದ್ಯರು, ಗಂಟಲಿನಲ್ಲಿ ಏನು ಸಿಕ್ಕಿ ಹಾಕಿಕೊಂಡಿಲ್ಲ ಎಂದು ಹೇಳಿದ್ದರು. ಆದ್ರೆ, ಮರುದಿನ ಅಂದರೆ ನಿನ್ನೆ ಭಾನುವಾರ ಮಗುವಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಇದರಿಂದ ಭಯಗೊಂಡ ಪೋಷಕರು ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದ್ರೆ ಶ್ವಾಸಕೋಶದಲ್ಲಿ ಸಿಪ್ಪೆ ಸಿಲುಕಿಕೊಂಡು ಉಸಿರಾಟದ ತೊಂದರೆಯಾಗಿ ಮಗು ಕೊನೆಯುಸಿರೆಳೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ